ಮುನಿಸು ಮರೆತು ಲೋಕ ಅದಾಲತ್ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಗಂಗಾವತಿ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಮೂರು ಜೋಡಿಗಳನ್ನು ಮತ್ತೆ ಒಂದುಗೂಡಿಸಿದೆ. ದಾಂಪತ್ಯದಲ್ಲಿನ ಮನಸ್ತಾಪ ಮರೆತು, ನ್ಯಾಯಾಧೀಶರ ಸಮ್ಮುಖದಲ್ಲಿ ಈ ದಂಪತಿಗಳು ಮರುಮದುವೆಯಾಗುವ ಮೂಲಕ ಪುನರ್ಮಿಲನ ಸಾಧಿಸಿದರು. ಇದು ಕುಟುಂಬ ಸಂಬಂಧಗಳನ್ನು ಬಲಪಡಿಸುವಲ್ಲಿ ನ್ಯಾಯಾಂಗದ ಪಾತ್ರ ಮತ್ತು ಲೋಕ ಅದಾಲತ್‌ನ ಯಶಸ್ಸನ್ನು ಎತ್ತಿ ತೋರಿಸುತ್ತದೆ.
ಕೊಪ್ಪಳ, ಮಾರ್ಚ್ 14: ದಾಂಪತ್ಯದಲ್ಲಿ ಬಿರುಕು ಮೂಡಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ ಮೂರು ಜೋಡಿಗಳು ಮುನಿಸು ಮರೆತು ನ್ಯಾಯಾಲಯದಲ್ಲಿ ಮತ್ತೆ ಒಂದಾದ ಘಟನೆ ಗಂಗಾವತಿ ಒಂದನೇ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್ನಲ್ಲಿ ನಡೆದಿದೆ. ಒಂದಾದ ಜೋಡಿಗಳಿಗೆ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ್, ಗುಂಡಪ್ಪ ಬಸವಣ್ಣೆಪ್ಪ ಹಳ್ಳಾಕಾಯಿ, ನಾಗೇಶ ಪಾಟೀಲ್ ಮೇಘಾ ಸೋಮಣ್ಣವರ ಸಮ್ಮುಖದಲ್ಲಿ ಮರು ಮದುವೆ ಮಾಡಿಸಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us