ಗಂಗಾವತಿ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀನಾಥ ಜುಲೈ 3 ರಂದು ಕಾಂಗ್ರೆಸ್ ಸೇರಲಿದ್ದಾರೆ!

ಗಂಗಾವತಿ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀನಾಥ ಜುಲೈ 3 ರಂದು ಕಾಂಗ್ರೆಸ್ ಸೇರಲಿದ್ದಾರೆ!

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on:Jun 23, 2022 | 1:05 PM

ಮಾಜಿ ಮುಖ್ಯಮಂತ್ರಿ ಮತ್ತು ಪಕ್ಷದ ಹಿರಿಯ ನಾಯಕರಾಗಿರುವ ಸಿದ್ದರಾಮಯ್ಯನವರೇ ಶ್ರೀನಾಥ್ಗೆ ಪಕ್ಷವನ್ನು ಸೇರಲು ಆಹ್ವಾನ ನೀಡಿದ್ದಾರಂತೆ. ಹಾಗಾಗಿ ಜುಲೈ 3 ರಂದು ಅವರು ಕಾಂಗ್ರೆಸ್ ಸೇರಲು ಮುಹೂರ್ತ ನಿಗದಿಯಾಗಿದೆ.

Koppal:  ಈ ಹಿಂದೆಯೂ ನಾವು ಗಂಗಾವತಿಯ ಮಾಜಿ ವಿಧಾನ ಪರಿಷತ್ ಸದಸ್ಯ ಹೆಚ್ ಆರ್ ಶ್ರೀನಾಥ (HR Srinath) ಅವರು ಕಾಂಗ್ರೆಸ್ (Congress) ಪಕ್ಷಕ್ಕೆ ಸೇರ್ಪಡೆಯಾಗಲಿರುವ ಬಗ್ಗೆ ಚರ್ಚೆ ಮಾಡಿದ್ದೆವು. ಅವರು ಕಳೆದ ತಿಂಗಳು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ (primary membership) ರಾಜೀನಾಮೆ ನೀಡಿದ್ದರು. ಅದಾದ ಬಳಿಕವೇ ಶ್ರೀನಾಥ ಕಾಂಗ್ರೆಸ್ ಪಕ್ಷಕ್ಕೆ ಸೇರುವ ತೀರ್ಮಾನವನ್ನು ಪ್ರಕಟಿಸಿದ್ದರು. ಮಾಜಿ ಮುಖ್ಯಮಂತ್ರಿ ಮತ್ತು ಪಕ್ಷದ ಹಿರಿಯ ನಾಯಕರಾಗಿರುವ ಸಿದ್ದರಾಮಯ್ಯನವರೇ ಶ್ರೀನಾಥ್ಗೆ ಪಕ್ಷವನ್ನು ಸೇರಲು ಆಹ್ವಾನ ನೀಡಿದ್ದಾರಂತೆ. ಹಾಗಾಗಿ ಜುಲೈ 3 ರಂದು ಅವರು ಕಾಂಗ್ರೆಸ್ ಸೇರಲು ಮುಹೂರ್ತ ನಿಗದಿಯಾಗಿದೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ತಾನೊಬ್ಬ ಟಿಕೆಟ್ ಆಕಾಂಕ್ಷಿ ಎಂದು ಹೇಳಿದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published on: Jun 23, 2022 01:02 PM