ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ

Edited By:

Updated on: Sep 27, 2024 | 6:32 PM

ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಇಂದು ನೇರವಾಗಿ ದೆಹಲಿಯಿಂದ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದಾರೆ. ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ವಿಚಾರಣೆ ಬೆನ್ನಲ್ಲೇ ಇದೀಗ ಹೆಚ್​ಡಿ ಕುಮಾರಸ್ವಾಮಿಗೆ ಲೋಕಾಯುಕ್ತ ಬುಲಾವ್​ ನೀಡಿತ್ತು. ಹೀಗಾಗಿ ಇಂದು ವಿಚಾರಣೆ ಎದುರಿಸುತ್ತಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​ 27: ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ವಿಚಾರಣೆಗೆ ಲೋಕಾಯುಕ್ತ ಕಚೇರಿಗೆ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ (HD Kumaraswamy) ಹಾಜರಾಗಿದ್ದಾರೆ. ದೆಹಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದಾರೆ. ಸದ್ಯ ಕಳೆದ ಅರ್ಧ ಗಂಟೆಯಿಂದ ಹೆಚ್​.ಡಿ.ಕುಮಾರಸ್ವಾಮಿ ವಿಚಾರಣೆ ನಡೆಯುತ್ತಿದೆ. ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಹೆಚ್​ಡಿ ಕುಮಾರಸ್ವಾಮಿಗೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ನೀಡಲಾಗಿತ್ತು. ಆದರೆ ಸೋಮವಾರ ಬೇರೆ ಕೆಲಸವಿರುವುದರಿಂದ ಇಂದೇ ವಿಚಾರಣೆಗೆ ಬರುವುದಾಗಿ ತಿಳಿಸಿದ್ದರು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More