Video: ಬಟಾಲಾದಲ್ಲಿ ಗ್ಯಾಂಗ್​​ಸ್ಟರ್ ಜಗ್ಗು ಭಗವಾನ್​ಪುರಿಯಾ ತಾಯಿಯ ಗುಂಡಿಕ್ಕಿ ಹತ್ಯೆ

Updated on: Jun 27, 2025 | 9:24 AM

ಪಂಜಾಬ್​ನ ಬಟಾಲಾ ನಗರದ ಜನನಿಬಿಡ ರಸ್ತೆಯಲ್ಲಿ ಬೈಕ್​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗ್ಯಾಂಗ್​​ಸ್ಟರ್ ಜಗ್ಗು ಭಗವಾನ್ಪುರಿಯಾ ತಾಯಿ ಹರ್ಜಿತ್​ ಕೌರ್​ಗೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಗಾಯಗೊಂಡಿದ್ದ ಹೌರ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ಕುಳಿತಿರುವಾಗ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಚಾಲಕ ಕರಣ್‌ವೀರ್ ಸಿಂಗ್ ಕೂಡ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದು, ಕುಖ್ಯಾತ ದೇವೇಂದ್ರ ಬಂಬಿಹಾ  ಗ್ಯಾಂಗ್ ಇದರ ಹೊಣೆಯನ್ನು ಹೊತ್ತುಕೊಂಡಿದೆ.

ಬಟಾಲಾ, ಜೂನ್ 27: ಪಂಜಾಬ್​ನ ಬಟಾಲಾ ನಗರದ ಜನನಿಬಿಡ ರಸ್ತೆಯಲ್ಲಿ ಬೈಕ್​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗ್ಯಾಂಗ್​​ಸ್ಟರ್ ಜಗ್ಗು ಭಗವಾನ್ಪುರಿಯಾ ತಾಯಿ ಹರ್ಜಿತ್​ ಕೌರ್​ಗೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಗಾಯಗೊಂಡಿದ್ದ ಹೌರ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ಕುಳಿತಿರುವಾಗ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಚಾಲಕ ಕರಣ್‌ವೀರ್ ಸಿಂಗ್ ಕೂಡ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದು, ಕುಖ್ಯಾತ ದೇವೇಂದ್ರ ಬಂಬಿಹಾ  ಗ್ಯಾಂಗ್ ಇದರ ಹೊಣೆಯನ್ನು ಹೊತ್ತುಕೊಂಡಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published on: Jun 27, 2025 09:23 AM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More