AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ, ರಾಜ್ಯದ ಬಿಜೆಪಿ ನಾಯಕ ಸೇರಿ ಸ್ಟಿಂಗ್ ಆಪರೇಷನ್ ಮಾಡಿಸಿದ್ದಾರೆ: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ

ಕೇಂದ್ರ ಸಚಿವ, ರಾಜ್ಯದ ಬಿಜೆಪಿ ನಾಯಕ ಸೇರಿ ಸ್ಟಿಂಗ್ ಆಪರೇಷನ್ ಮಾಡಿಸಿದ್ದಾರೆ: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ

ದಿಲೀಪ್​, ಚೌಡಹಳ್ಳಿ
| Edited By: |

Updated on: Oct 09, 2026 | 11:19 AM

Share

ಕಾಂಗ್ರೆಸ್ ಶಾಸಕ ಗಣಿಗ ರವಿ ಅವರು ರಾಜ್ಯ ಸರ್ಕಾರದ ವಿರುದ್ಧ ನಡೆಯುತ್ತಿರುವ ಸ್ಟಿಂಗ್ ಆಪರೇಷನ್ ಕುರಿತು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕೇಂದ್ರದ ಸಚಿವರು ಮತ್ತು ರಾಜ್ಯದ ನಾಯಕರು ಸೇರಿ ಖಾಸಗಿ ಕಂಪನಿಗಳಿಗೆ ಸುಪಾರಿ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಆಡಿಯೋ, ವಿಡಿಯೋ, ಫೋಟೋ ಸಹಿತ ದಾಖಲೆಗಳನ್ನು ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡುವುದಾಗಿ ಶಾಸಕರು ತಿಳಿಸಿದ್ದಾರೆ.

ಮಂಡ್ಯ, ಅಕ್ಟೋಬರ್​​ 09: ಸ್ಟಿಂಗ್​​ ಆಪರೇಷನ್​​ ವಿವಾದ ರಾಜ್ಯದಲ್ಲಿ ಮತ್ತೊಂದು ಸ್ಫೋಟಕ ತಿರುವು ಪಡೆದುಕೊಂಡಿದ್ದು, ಹೆಚ್​​.ಡಿ. ಕುಮಾರಸ್ವಾಮಿ ಅವರ ರೀತಿಯಲ್ಲಿ ಪೆನ್‌ ಡ್ರೈವ್​ ಪ್ರದರ್ಶಿಸಿ ದಾಖಲೆ ಬಿಡುಗಡೆ ಮಾಡ್ತೀನಿ ಎಂದು ಮಂಡ್ಯದಲ್ಲಿ ಕಾಂಗ್ರೆಸ್​​ ಶಾಸಕ ಗಣಿಗ ರವಿ ಹೇಳಿದ್ದಾರೆ. ಇನ್ನೊಂದು ವಾರದಲ್ಲಿ ಸ್ಟಿಂಗ್ ಕುತಂತ್ರದ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತೇನೆ. ಡಿಕೆಶಿ ಸಿಎಂ ಆದಮೇಲೆ ಅಭಿವೃದ್ಧಿ ಶರವೇಗ ಪಡೆದುಕೊಂಡಿದೆ. ಇದನ್ನು ಸಹಿಸದೆ ವಿಪಕ್ಷಗಳ ನಾಯಕರು ಅಪಪ್ರಚಾರ ಮಾಡ್ತಿದ್ದಾರೆ. ಸ್ಟಿಂಗ್ ಆಪರೇಷನ್ ಮಾಡಲು ದೆಹಲಿ ಮೂಲದ ಏಜೆನ್ಸಿಗೆ ಸುಪಾರಿ ನೀಡಲಾಗಿದೆ. ಅವರಿಗೆ ಬೆಂಗಳೂರಿನ ಹೋಟೆಲ್‌ನಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿದ್ದಾರೆ. ಕೇಂದ್ರ ಸಚಿವರೊಬ್ಬರು, ರಾಜ್ಯದ ಬಿಜೆಪಿ ನಾಯಕರೊಬ್ಬರು ಸೇರಿ ಸ್ಟಿಂಗ್ ಆಪರೇಷನ್​ ನಡೆಸಲು ಸುಪಾರಿ ಕೊಟ್ಟಿದ್ದಾರೆ. ಸಚಿವರನ್ನು ಸ್ಟಿಂಗ್ ಮಾಡಿ ಸರ್ಕಾರಕ್ಕೆ ಮುಜುಗರ ತರುವ ಪ್ಲಾನ್​ ಅವರದ್ದಾಗಿದೆ. ಆದರೆ ನಮ್ಮ ಸಚಿವರು ಶುದ್ಧ ಹಸ್ತರಿದ್ದಾರೆ, ಅವರ ಬಲೆಗೆ ಬಿದ್ದಿಲ್ಲ. ಸ್ಟಿಂಗ್‌ ಮಾಡಿಸಲು ಸುಪಾರಿ ಕೊಟ್ಟಿರುವ ಬಗ್ಗೆ ಎಲ್ಲಾ ದಾಖಲೆ ಇದೆ. ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡ್ತೀನಿ. ಇದು ಹಿಟ್​ ಆ್ಯಂಡ್​​ ರನ್​ ಆಗಲ್ಲ, ಯಾವ ಏಜೆನ್ಸಿ, ಯಾರು ಭಾಗಿಯಾಗಿದ್ದಾರೆ, ಎಷ್ಟು ಹಣ ಕೊಟ್ಟಿದ್ದಾರೆ ಯಾವ್ಯಾವ ಸಚಿವರನ್ನು ಭೇಟಿಯಾಗಿದ್ದಾರೆ, ಯಾವ್ಯಾವ ನಾಯಕರ ಪಿಎಗಳಿದ್ರು ಎಂಬ ಎಲ್ಲಾ ದಾಖಲೆಗಳಿವೆ. ಸಿಸಿಟಿವಿ, ಆಡಿಯೋ, ವೀಡಿಯೋ ಸಮೇತ ದಾಖಲೆ ಇದೆ. ದಾಖಲೆ ಇರುವುದರಿಂದಲೇ ಸಿಎಂ ಕ್ಯಾಬಿನೆಟ್‌ನಲ್ಲಿ ಎಚ್ಚರಿಕೆ ನೀಡಿದ್ರು. 1 ವಾರದೊಳಗೆ ತನಿಖಾಧಿಕಾರಿ ಮುಂದೆ ದಾಖಲೆ ಇಡುತ್ತೇವೆ. ಮಾಧ್ಯಮಗಳ ಮುಂದೆಯೂ ಎಲ್ಲಾ ದಾಖಲೆ ಬಿಡುಗಡೆ ಮಾಡ್ತೀನಿ ಎಂದು ಗಣಿಗ ರವಿ ಪೆನ್‌ಡ್ರೈವ್​ ಪ್ರದರ್ಶಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ದಿಲೀಪ್​, ಚೌಡಹಳ್ಳಿ
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More