AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾರ್ಡನ್ ಸಿಟಿ ಟು ಗಾರ್ಬೇಜ್ ಸಿಟಿ: ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?

ಗಾರ್ಡನ್ ಸಿಟಿ ಟು ಗಾರ್ಬೇಜ್ ಸಿಟಿ: ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?

ಅಕ್ಷಯ್​ ಪಲ್ಲಮಜಲು​​
|

Updated on:May 16, 2026 | 11:23 PM

Share

ಬೆಂಗಳೂರಿನ ಜೆ.ಪಿ. ಪಾರ್ಕ್ ಹಿಂಭಾಗದ ಎಂಇಎಸ್ ರಸ್ತೆ ಮೇಲ್ಸೇತುವೆ ಕೆಳಭಾಗವು ಕಸದ ತೊಟ್ಟಿಯಾಗಿ ಮಾರ್ಪಟ್ಟಿದೆ. ಪ್ಲಾಸ್ಟಿಕ್, ಕೊಳೆತ ಆಹಾರದ ರಾಶಿಯಿಂದ ದುರ್ನಾತ ಬೀರುತ್ತಿದ್ದು, ಸಾರ್ವಜನಿಕರ ಆರೋಗ್ಯಕ್ಕೆ ಅಪಾಯ ತಂದಿದೆ. ನಾಗರಿಕ ಪ್ರಜ್ಞೆಯ ಕೊರತೆ ಮತ್ತು BBMP ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣವಾಗಿದ್ದು, ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ "ಬ್ಲಾಕ್ ಸ್ಪಾಟ್" ಬೆಂಗಳೂರಿನ ಸ್ವಚ್ಛತೆಗೆ ಸವಾಲಾಗಿದೆ.

ಬೆಂಗಳೂರು, ಮೇ,16: ಸಿಲಿಕಾನ್ ಸಿಟಿ ಬೆಂಗಳೂರಿನ ಜೆ.ಪಿ. ಪಾರ್ಕ್ ಹಿಂಭಾಗದಲ್ಲಿರುವ ಎಂಇಎಸ್ (MES) ರಸ್ತೆ ಮೇಲ್ಸೇತುವೆಯ ಕೆಳಭಾಗವು ಪ್ರಸ್ತುತ ಅನಧಿಕೃತ ಕಸದ ತೊಟ್ಟಿಯಾಗಿ (Black Spot) ಮಾರ್ಪಟ್ಟಿದೆ. ನಾಗರಿಕ ಪ್ರಜ್ಞೆಯ ಕೊರತೆ ಮತ್ತು GBA ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಈ ಪ್ರದೇಶವೇ ಸಾಕ್ಷಿಯಾಗಿದ್ದು, ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿ ಪ್ಲಾಸ್ಟಿಕ್ ತ್ಯಾಜ್ಯ, ಕೊಳೆತ ಆಹಾರದ ಪೊಟ್ಟಣಗಳು ಮತ್ತು ಇತರ ಕಸದ ರಾಶಿಯನ್ನು ನೋಡಿದರೆ ಇದು ಕೇವಲ ಒಂದು ದಿನದಲ್ಲಿ ಸೃಷ್ಟಿಯಾದದ್ದಲ್ಲ ಎಂಬುದು ಸ್ಪಷ್ಟವಾಗುತ್ತದೆ. ಯಾವುದೇ ಕಾನೂನಿನ ಭಯವಿಲ್ಲದೆ ಬೇಜವಾಬ್ದಾರಿ ನಾಗರಿಕರು ಮತ್ತು ಸ್ಥಳೀಯ ವ್ಯಾಪಾರಿಗಳು ಈ ಸಾರ್ವಜನಿಕ ಜಾಗವನ್ನು ಕಸ ಸುರಿಯುವ ಕಸದ ತೊಟ್ಟಿಯನ್ನಾಗಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಇಡೀ ಪ್ರದೇಶವು ದುರ್ನಾತ ಬೀರುತ್ತಿದ್ದು, ಸಾರ್ವಜನಿಕರ ಆರೋಗ್ಯಕ್ಕೆ ಭಾರಿ ಕುತ್ತು ತಂದಿಟ್ಟಿದೆ. ಈ ಬಗ್ಗೆ ವಿಡಿಯೋವೊಂದನ್ನು @KarnatakaPortfolio ಎಂಬ ಎಕ್ಸ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 16, 2026 02:52 PM

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More