ಡಾ. ವಿಷ್ಣುವರ್ಧನ್ ರಸ್ತೆಯಲ್ಲಿ ಕಸದ ರಾಶಿ: ಅಧಿಕಾರಿಗಳ ಗಮನಕ್ಕೆ ತಂದ ಅನಿರುದ್ಧ್

Updated on: Mar 29, 2026 | 1:55 PM

ಬೆಂಗಳೂರಿನ ‘ಡಾ. ವಿಷ್ಣುವರ್ಧನ್ ರಸ್ತೆ’ಯಲ್ಲಿ ಬಿದ್ದಿರುವ ಕಸದ ರಾಶಿಯ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಕಸ ಹಾಕಬಾರದು ಎಂಬ ಎಚ್ಚರಿಕೆ ಫಲದ ಎದುರಲ್ಲೇ ಜನರು ಕಸ ಸುರಿದಿರುವುದನ್ನು ಅನಿರುದ್ಧ್ ಅವರು ಟೀಕಿಸಿದ್ದಾರೆ. ಈ ವಿಡಿಯೋ ವೈರಲ್ ಆದ ಬಳಿಕ ಸಂಬಂಧಪಟ್ಟವರು ಕ್ರಮ ತೆಗೆದುಕೊಂಡಿದ್ದಾರೆ.

ನಟ ಅನಿರುದ್ಧ್ ಜತ್ಕರ್ (Anirudh Jatkar) ಅವರು ‘ಸ್ವಚ್ಛತೆಗಾಗಿ ನಾನೂ ಸಹಭಾಗಿ’ ಎಂಬ ಅಭಿಯಾನವನ್ನು ಕಳೆದ ಐದು ವರ್ಷಗಳಿಂದ ಮಾಡುತ್ತಿದ್ದಾರೆ. ಎಲ್ಲಿಯೇ ಕಸದ ರಾಶಿ ಕಂಡರೂ ಅಧಿಕಾರಿಗಳ ಗಮನಕ್ಕೆ ತರುತ್ತಾರೆ. ಸಮಸ್ಯೆ ಪರಿಹಾರ ಆಗಬೇಕು ಎಂಬ ಉದ್ದೇಶದಿಂದ ಜನರಲ್ಲಿ ಮತ್ತು ಜನಪ್ರತಿನಿಧಿಗಳಲ್ಲಿ ಮನವಿ ಮಾಡಿಕೊಳ್ಳುತ್ತಾರೆ. ಸಿನಿಮಾ, ಸೀರಿಯಲ್ ಕೆಲಸಗಳ ನಡುವೆಯೂ ಅವರು ಈ ಸ್ವಚ್ಛತೆಯ ಅಭಿಯಾನ ನಿಲ್ಲಿಸಿಲ್ಲ. ಈಗ ಬೆಂಗಳೂರಿನ ‘ಡಾ. ವಿಷ್ಣುವರ್ಧನ್ ರಸ್ತೆ’ಯಲ್ಲಿ ಬಿದ್ದ ಕಸದ ರಾಶಿಯ ವಿಡಿಯೋವನ್ನು ಅವರು ಪೋಸ್ಟ್ ಮಾಡಿದ್ದಾರೆ. ಕಸ ಹಾಕಬಾರದು ಎಂಬ ಎಚ್ಚರಿಕೆ ಫಲದ ಎದುರಲ್ಲೇ ಜನರು ಕಸ ಸುರಿದಿರುವುದನ್ನು ಅನಿರುದ್ಧ್ ಅವರು ಟೀಕಿಸಿದ್ದಾರೆ. ಈ ವಿಡಿಯೋ ವೈರಲ್ ಆದ ಬಳಿಕ ಸಂಬಂಧಪಟ್ಟವರು ಕ್ರಮ ತೆಗೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Mar 29, 2026 01:52 PM
Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More