ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಿಸುತ್ತಿದ್ದಂತೆಯೇ ಪ್ರತ್ಯಕ್ಷವಾದ ಗರುಡ!
ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ, ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಸಮಾಧಿ ಬಳಿ ಅಚ್ಚರಿಯೊಂದು ನಡೆದಿದೆ. ಸಮಾಧಿ ಬಳಿ ಅರ್ಚಕರು ವಿಷ್ಣು ಸಹಸ್ರನಾಮ ಹಾಗೂ ಇತರ ಮಂತ್ರ ಪಠಣ ಮಾಡುತ್ತಿದ್ದಾಗ ಗರುಡವೊಂದು ಹಾರಿ ಬಂದು ಸಮಾಧಿಗೆ ಪ್ರದಕ್ಷಿಣೆ ಹಾಕಿ ಹೋಗಿದೆ.
ಹಾಸನ, ಜುಲೈ 21: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಸಂಸ್ಕಾರ ಹಾಸನದ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನ ಜಮೀನಿನಲ್ಲಿ ಸೋಮವಾರ ನಡೆದಿದೆ. ಅದಾದ ನಂತರ ಸಮಾಧಿ ಇರುವ ಜಾಗದಲ್ಲಿ ರುದ್ರ, ಚಮಕ, ಗಾಯಿತ್ರಿ ಮಂತ್ರ ಹಾಗೂ ವಿಷ್ಣು ಸಹಸ್ರನಾಮ ಪಠಣ ಮಾಡಲಾಗಿದೆ. ವಿಷ್ಣು ಸಹಸ್ರನಾಮ ಪಠಿಸುತ್ತಿರುವಾಗ ಗರುಡ ಕಾಣಿಸಿದ್ದು, ಸಮಾಧಿ ಮೇಲೆ ಪ್ರದಕ್ಷಿಣೆ ಹಾಕಿ ಹೋಗಿರುವುದು ಅಚ್ಚರಿ ಮೂಡಿಸಿದೆ. ಚೆನ್ನಮ್ಮ ಅಪಾರ ದೈವ ಭಕ್ತೆಯಾಗಿದ್ದರು. ಪ್ರತಿನಿತ್ಯ ದೇವರ ಪೂಜೆ ವೇಳೇ ಶ್ಲೋಕಗಳನ್ನು ಪಠಿಸುತ್ತಿದ್ದರು. ಹೀಗಾಗಿ ಅವರ ಸಮಾಧಿ ಬಳಿ ಅರ್ಚಕರಿಂದ ರುದ್ರ, ಚಮಕ, ಗಾಯಿತ್ರಿ ಮಂತ್ರ ಹಾಗೂ ವಿಷ್ಣು ಸಹಸ್ರನಾಮ ಪಠಣ ಮಾಡಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್ಡ್ರೈವ್ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

