ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಿಸುತ್ತಿದ್ದಂತೆಯೇ ಪ್ರತ್ಯಕ್ಷವಾದ ಗರುಡ!

Edited By:

Updated on: Jul 21, 2026 | 1:46 PM

ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಸಮಾಧಿ ಬಳಿ ಅಚ್ಚರಿಯೊಂದು ನಡೆದಿದೆ. ಸಮಾಧಿ ಬಳಿ ಅರ್ಚಕರು ವಿಷ್ಣು ಸಹಸ್ರನಾಮ ಹಾಗೂ ಇತರ ಮಂತ್ರ ಪಠಣ ಮಾಡುತ್ತಿದ್ದಾಗ ಗರುಡವೊಂದು ಹಾರಿ ಬಂದು ಸಮಾಧಿಗೆ ಪ್ರದಕ್ಷಿಣೆ ಹಾಕಿ ಹೋಗಿದೆ.

ಹಾಸನ, ಜುಲೈ 21: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಸಂಸ್ಕಾರ ಹಾಸನದ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನ ಜಮೀನಿನಲ್ಲಿ ಸೋಮವಾರ ನಡೆದಿದೆ. ಅದಾದ ನಂತರ ಸಮಾಧಿ ಇರುವ ಜಾಗದಲ್ಲಿ ರುದ್ರ, ಚಮಕ, ಗಾಯಿತ್ರಿ ಮಂತ್ರ ಹಾಗೂ ವಿಷ್ಣು ಸಹಸ್ರನಾಮ ಪಠಣ ಮಾಡಲಾಗಿದೆ. ವಿಷ್ಣು ಸಹಸ್ರನಾಮ ಪಠಿಸುತ್ತಿರುವಾಗ ಗರುಡ ಕಾಣಿಸಿದ್ದು, ಸಮಾಧಿ ಮೇಲೆ ಪ್ರದಕ್ಷಿಣೆ ಹಾಕಿ ಹೋಗಿರುವುದು ಅಚ್ಚರಿ ಮೂಡಿಸಿದೆ. ಚೆನ್ನಮ್ಮ ಅಪಾರ ದೈವ ಭಕ್ತೆಯಾಗಿದ್ದರು. ಪ್ರತಿನಿತ್ಯ ದೇವರ ಪೂಜೆ ವೇಳೇ ಶ್ಲೋಕಗಳನ್ನು ಪಠಿಸುತ್ತಿದ್ದರು. ಹೀಗಾಗಿ ಅವರ ಸಮಾಧಿ ಬಳಿ ಅರ್ಚಕರಿಂದ ರುದ್ರ, ಚಮಕ, ಗಾಯಿತ್ರಿ ಮಂತ್ರ ಹಾಗೂ ವಿಷ್ಣು ಸಹಸ್ರನಾಮ ಪಠಣ ಮಾಡಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More