ಬದುಕು ಬದಲಿಸಿದ ‘ಕೆಜಿಎಫ್’: ಪ್ರಶಾಂತ್ ನೀಲ್​ಗೆ ಧನ್ಯವಾದ ತಿಳಿಸಿದ ಗರುಡ ರಾಮ್

Edited By:

Updated on: Oct 23, 2024 | 10:59 PM

ಕನ್ನಡ ಚಿತ್ರರಂಗದಲ್ಲಿ ಗರುಡ ರಾಮ್ ಅವರು ಖಡಕ್ ನಟನಾಗಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಈ ಇಮೇಜ್ ಸಿಕ್ಕಿದ್ದು ‘ಕೆಜಿಎಫ್​’ ಸಿನಿಮಾದಿಂದ. ಈಗ ಅವರು ‘ಬಘೀರ’ ಸಿನಿಮಾದಲ್ಲಿ ಕೂಡ ಪ್ರಮುಖ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆಜಿಎಫ್’ ಸಿನಿಮಾ ತೆರೆಕಂಡ ಬಳಿಕ ಅವರಿಗೆ ಹಲವು ಅವಕಾಶಗಳು ಸಿಕ್ಕವು. ಆ ಬಗ್ಗೆ ಅವರು ಮಾತನಾಡಿದ್ದಾರೆ.

‘ನಾನು ಪ್ರಶಾಂತ್ ನೀಲ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಸ್ಥಾನದಲ್ಲಿ ನಾನು ಕುಳಿತು ಮಾತನಾಡುತ್ತಿದ್ದೇನೆ ಅಂದರೆ ಅದರ ಕ್ರೆಡಿಟ್ ಪ್ರಶಾಂತ್ ನೀಲ್ ಅವರಿಗೆ ಸಲ್ಲಬೇಕು. ಇಲ್ಲಿಯ ತನಕ ಒಳ್ಳೊಳೆಯ ಸಿನಿಮಾಗಳನ್ನು ಮಾಡುತ್ತಾ ಬಂದಿದ್ದೇನೆ. ಈಗ ‘ಬಘೀರ’ ಸಿನಿಮಾ ಮೇಲೆ ಗಮನ ಹರಿಸಿದ್ದೇನೆ. ಆ ಸಿನಿಮಾ ರಿಲೀಸ್ ಆಗಿ ಕೆಲವು ದಿನಗಳು ಕಳೆದ ಬಳಿಕ ಬೇರೆ ಸಿನಿಮಾಗಳ ಬಗ್ಗೆ ಹೇಳುತ್ತೇನೆ’ ಎಂದು ಗರುಡ ರಾಮ್ ಅವರು ಹೇಳಿದ್ದಾರೆ. ‘ಬಘೀರ’ ಸಿನಿಮಾ ಅಕ್ಟೋಬರ್​ 31ರಂದು ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More