‘ಬಘೀರ’ ಸಿನಿಮಾದಲ್ಲಿ ಹೇಗಿದೆ ಗರುಡಾ ರಾಮ್ ಪಾತ್ರ? ಕಥೆ ಬಗ್ಗೆ ಸುಳಿವು ನೀಡಿದ ನಟ

Edited By:

Updated on: Oct 23, 2024 | 8:57 PM

ಶ್ರೀಮುರಳಿ ನಟನೆಯ ‘ಬಘೀರ’ ಸಿನಿಮಾ ತೆರೆಕಾಣಲು ಸಜ್ಜಾಗಿದೆ. ಈ ಚಿತ್ರದಲ್ಲಿ ಗರುಡಾ ರಾಮ್ ಅವರು ವಿಲನ್ ಪಾತ್ರ ಮಾಡಿದ್ದಾರೆ. ಸಿನಿಮಾದಲ್ಲಿ ತಮ್ಮ ಪಾತ್ರ ಹೇಗಿದೆ ಎಂಬುದನ್ನು ಅವರು ವಿವರಿಸಿದ್ದಾರೆ. ಈ ಸಿನಿಮಾಗೆ ‘ಹೊಂಬಾಳೆ ಫಿಲ್ಮ್ಸ್​’ ಬಂಡವಾಳ ಹೂಡಿದೆ. ಈ ಸಂಸ್ಥೆಯ ಜೊತೆ ಗರುಡಾ ರಾಮ್ ಮಾಡಿದ ಮೂರನೇ ಸಿನಿಮಾ ಇದು.

ಪ್ರಶಾಂತ್ ನೀಲ್​ ಬರೆದ ‘ಬಘೀರ’ ಕಥೆಗೆ ಡಾ. ಸೂರಿ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಗರುಡಾ ರಾಮ್ ಮುಖ್ಯ ವಿಲನ್ ಆಗಿದ್ದಾರೆ. ಟ್ರೇಲರ್​ನಲ್ಲಿ ಅವರ ಪಾತ್ರದ ಝಲಕ್ ತೋರಿಸಲಾಗಿದೆ. ‘ಈ ಪಾತ್ರವನ್ನು ಡಾ. ಸೂರಿ ಅವರು ಡಿಸೈನ್ ಮಾಡಿದ್ದಾರೆ. ಸಮಾಜದಲ್ಲಿ ತಾನು ಮಾಡಿದ್ದೇ ಸರಿ ಎಂದುಕೊಳ್ಳವ ವಿಲನ್ ಪಾತ್ರ ನನಗೆ ಸಿಕ್ಕಿದೆ. ಆ ಪಾತ್ರದಿಂದ ಸಮಾಜಕ್ಕೆ ತೊಂದರೆ ಆದಾಗ ಕಾಪಾಡಲು ಹೀರೋ ಬರುತ್ತಾನೆ’ ಎಂದು ಗರುಡಾ ರಾಮ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More