ಆರ್.ಆರ್ ನಗರದ ಪಟ್ಟಣಗೆರೆ ಬಳಿ ಚಾಟ್ಸ್ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟ!
ಬೆಂಗಳೂರಿನ ಆರ್.ಆರ್.ನಗರದ ಪಟ್ಟಣಗೆರೆ ಸಮೀಪದ ಚಾಟ್ಸ್ ಅಂಗಡಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಬಬ್ಲು, ಲಕ್ಷ್ಮಮ್ಮ ಮತ್ತು ಒಂಬತ್ತು ವರ್ಷದ ಬಾಲಕ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು, ಅಕ್ಟೋಬರ್ 24: ಬೆಂಗಳೂರಿನ ಆರ್.ನಗರದ ಪಟ್ಟಣಗೆರೆ ಸಮೀಪದ ಚಾಟ್ಸ್ ಅಂಗಡಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಆರ್.ಆರ್.ನಗರದ ಪಟ್ಟಣಗೆರೆ ಬಳಿ ಇರುವ ಚಾಟ್ಸ್ ಅಂಗಡಿಯಲ್ಲಿ ನಡೆದಿದೆ. ಸಿಲಿಂಡರ್ ಸ್ಫೋಟದಿಂದಾಗಿ ಬಬ್ಲು, ಲಕ್ಷ್ಮಮ್ಮ ಹಾಗೂ ಒಂಬತ್ತು ವರ್ಷದ ಬಾಲಕನಿಗೆ ತೀವ್ರ ಗಾಯಗಳಾಗಿವೆ. ಮಾಹಿತಿ ತಿಳಿದ ಕೂಡಲೇ ಆರ್.ಆರ್.ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಾಯಗೊಂಡಿರುವ ಮೂವರನ್ನೂ ತಕ್ಷಣವೇ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸಿಲಿಂಡರ್ ಸ್ಫೋಟಗೊಂಡ ಕಾರಣ ಚಾಟ್ಸ್ ಅಂಗಡಿಯ ಪರಿಸ್ಥಿತಿಯು ದೃಶ್ಯಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ಹೆಚ್ಚಿನ ಸಂಖ್ಯೆಯ ಜನ ಇದ್ದ ಸಮಯದಲ್ಲಿ ಈ ಘಟನೆ ಸಂಭವಿಸಿದ್ದರೆ, ಇನ್ನಷ್ಟು ದೊಡ್ಡ ಅನಾಹುತವಾಗುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸದ್ಯಕ್ಕೆ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

