ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು

Updated on: Mar 11, 2026 | 3:38 PM

ಅಮೆರಿಕ –ಇಸ್ರೇಲ್‌ ಮತ್ತು ಇರಾನ್‌ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಕಚ್ಚಾ ತೈಲದ ಬೆಲೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರಿ ಏರಿಕೆ ಕಂಡಿದ್ದರಿಂದ, ವಾಣಿಜ್ಯ ಬಳಕೆಯ ಅಡುಗೆ ಅನಿಲ ಪೂರೈಕೆ ಗಣನೀಯವಾಗಿ ಇಳಿಕೆ ಕಂಡಿದೆ. ಇದರಿಂದ ಭಾರತದಾದ್ಯಂತ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇನ್ನು ಹೋಟೆಲ್ ಉದ್ಯಮಕ್ಕೆ ಭಾರಿ ಸಮಸ್ಯೆಯಾಗುತ್ತಿದೆ. ಇನ್ನು ಎಲ್​​ಪಿಜಿ ಗ್ಯಾಸ್ ಆಟೋಗೂ ಸಹ ಇದರ ಬಿಸಿ ತಟ್ಟಿದ್ದು, ಬೆಂಗಳೂರಿನ ಹಲವು ಗ್ಯಾಸ್ ಬಂಕ್​ಗಳು ಬಂದ್ ಆಗಿವೆ. ಇನ್ನೊಂದೆಡೆ ಗ್ಯಾಸ್ ಇಲ್ಲಿದೆ ಆಟೋಗಳು ಸಹ ನಿಂತಲ್ಲೇ ನಿಂತುಕೊಂಡಿವೆ.

ಬೆಂಗಳೂರು, (ಮಾರ್ಚ್ 11): ಅಮೆರಿಕ –ಇಸ್ರೇಲ್‌ ಮತ್ತು ಇರಾನ್‌ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಕಚ್ಚಾ ತೈಲದ ಬೆಲೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರಿ ಏರಿಕೆ ಕಂಡಿದ್ದರಿಂದ, ವಾಣಿಜ್ಯ ಬಳಕೆಯ ಅಡುಗೆ ಅನಿಲ ಪೂರೈಕೆ ಗಣನೀಯವಾಗಿ ಇಳಿಕೆ ಕಂಡಿದೆ. ಇದರಿಂದ ಭಾರತದಾದ್ಯಂತ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇನ್ನು ಹೋಟೆಲ್ ಉದ್ಯಮಕ್ಕೆ ಭಾರಿ ಸಮಸ್ಯೆಯಾಗುತ್ತಿದೆ. ಇನ್ನು ಎಲ್​​ಪಿಜಿ ಗ್ಯಾಸ್ ಆಟೋಗೂ ಸಹ ಇದರ ಬಿಸಿ ತಟ್ಟಿದ್ದು, ಬೆಂಗಳೂರಿನ ಹಲವು ಗ್ಯಾಸ್ ಬಂಕ್​ಗಳು ಬಂದ್ ಆಗಿವೆ. ಇನ್ನೊಂದೆಡೆ ಗ್ಯಾಸ್ ಇಲ್ಲಿದೆ ಆಟೋಗಳು ಸಹ ನಿಂತಲ್ಲೇ ನಿಂತುಕೊಂಡಿವೆ.

Published on: Mar 11, 2026 03:35 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More