ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಗೃಹಬಳಕೆಯ ಸಿಲಿಂಡರ್‌ಗಳನ್ನು ಹೊತ್ತ ಲಾರಿ ಪಲ್ಟಿಯಾಗಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಲಾರಿ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್, ಎಲ್ಲರೂ ಪ್ರಾಣಾಪಾಯದಿಂದ ಬಚಾವಾಗಿದ್ದಾರೆ. ಅನಿಲ ಸೋರಿಕೆ ಆಗದಂತೆ ಸಿಬ್ಬಂದಿ ತುರ್ತು ಕ್ರಮ ಕೈಗೊಂಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ರಾಜಾಜಿನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು, ಮಾರ್ಚ್ 28: ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ಹೊತ್ತ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿಯಲ್ಲಿದ್ದ ಇತರ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ನಂತರ, ಗ್ಯಾಸ್ ಸಿಲಿಂಡರ್‌ಗಳಿಂದ ಅನಿಲ ಸೋರಿಕೆ ಆಗದಂತೆ ತುರ್ತು ಕ್ರಮಗಳನ್ನು ಕೈಗೊಳ್ಳಲಾಯಿತು. ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ದೊಡ್ಡ ಅನಾಹುತ ತಪ್ಪಿದೆ.
ಲಾರಿ ಪಲ್ಟಿಯಾದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಘಟನೆ ಕುರಿತು ರಾಜಾಜಿನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಿಸಿಟಿವಿ ಕ್ಯಾಮರಾದಲ್ಲಿ ಈ ಅಪಘಾತದ ದೃಶ್ಯಗಳು ದಾಖಲಾಗಿದ್ದು, ಫೂಟೇಜ್‌ಗಳನ್ನು ಪರಿಶೀಲಿಸಲಾಗುತ್ತಿದೆ.
‘ಗೋ ಬ್ಯಾಕ್ ಜಮೀರ್ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್ನಲ್ಲೇ ಅವಮಾನ!
ರಚಿತಾ ರಾಮ್ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!
