ಬೋರ್‌ವೆಲ್‌ನಿಂದ ನೀರು ಅಲ್ಲ; ಗ್ಯಾಸ್​​ ಬರುತ್ತಿದೆ, ಬೆಂಕಿ ಹೊತ್ತಿಕೊಂಡು ಧಗಧಗಿಸುತ್ತಿದೆ! ಸ್ಥಳೀಯರಿಗೆ ಆತಂಕ

ಸಾಧು ಶ್ರೀನಾಥ್​

Updated on: Jul 15, 2023 | 1:54 PM

20 ವರ್ಷಗಳ ಹಿಂದೆ ಒಎನ್‌ಜಿ ಭೂಕಂಪನ ಸಮೀಕ್ಷೆಗಾಗಿ ಪಶ್ಚಿಮ ಬಂಗಾಳದ ಕಾರ್ಮಿಕರು ಈ ಪ್ರದೇಶದಲ್ಲಿ ಕೊಳವೆಬಾವಿಗಳನ್ನು ತೋಡಿದ್ದರು. ಕೆಲ ರಂಧ್ರಗಳಿಂದ ಗ್ಯಾಸ್ ಸೋರಿಕೆಯಾಗಿ ಗುಳ್ಳೆಗ

ಕೋನಸೀಮೆ ಜಿಲ್ಲೆಯ ಗುಡಿಮಲ್ಲಂಕದಲ್ಲಿ ಇಂದು ಶನಿವಾರ ಬೆಳಗ್ಗೆ 6 ಗಂಟೆಯಿಂದ ಅನಿಲ ಸೋರಿಕೆಯಾಗುತ್ತಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಎಷ್ಟೇ ಪ್ರಯತ್ನಿಸಿದರೂ ಬೆಂಕಿಯನ್ನು ಹತೋಟಿಗೆ ತರಲು ಸಾಧ್ಯವಾಗಿಲ್ಲ. ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನ ಪಡಲಾಗುತ್ತಿದೆ. ಗುಡಿಮಲ್ಲಂಕದ ಗೋಪರಾಜು ಎಂಬ ರೈತನ ಕೊಳವೆಬಾವಿಯಿಂದ ಗ್ಯಾಸ್ ಸೋರಿಕೆಯಾಗಿ ಪಕ್ಕದ ವಿದ್ಯುತ್ ಸ್ವಿಚ್ ಬೋರ್ಡ್ ಮೂಲಕ ಶಾಟ್ ಸರ್ಕ್ಯೂಟ್ ಬೆಂಕಿ ವ್ಯಾಪಿಸುತ್ತಿರುವುದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. 20 ವರ್ಷಗಳ ಹಿಂದೆ ಒಎನ್‌ಜಿ ಭೂಕಂಪನ ಸಮೀಕ್ಷೆಗಾಗಿ ಪಶ್ಚಿಮ ಬಂಗಾಳದ ಕಾರ್ಮಿಕರು ಈ ಪ್ರದೇಶದಲ್ಲಿ ಕೊಳವೆಬಾವಿಗಳನ್ನು ತೋಡಿದ್ದರು. ಕೆಲ ರಂಧ್ರಗಳಿಂದ ಗ್ಯಾಸ್ ಸೋರಿಕೆಯಾಗಿ ಗುಳ್ಳೆಗಳು ಆಗಾಗ ಬರುತ್ತಿವೆ ಎನ್ನುತ್ತಾರೆ ಸ್ಥಳೀಯರು. ಭೂಕಂಪನ ಸಮೀಕ್ಷೆಗಾಗಿ ಹಾಕಿರುವ ಕೊಳವೆಬಾವಿಗಳೂ ಈ ಘಟನೆಗೆ ಕಾರಣವಾಗಿವೆ ಎನ್ನಲಾಗಿದೆ. ಬೋರ್ ವೆಲ್ ನಿಂದ ಬೆಂಕಿ ಕಾಣಿಸಿಕೊಂಡು ಸ್ಥಳೀಯರು ತೀವ್ರ ಭಯ ವ್ಯಕ್ತಪಡಿಸುತ್ತಿದ್ದಾರೆ.

Loading...
Unable to load recommendations.
Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು