ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಹಾಗೂ ಬಸ್​ ಮಧ್ಯೆ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಹಾಗೂ ಬಸ್​ ಮಧ್ಯೆ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಗಂಗಾಧರ​ ಬ. ಸಾಬೋಜಿ

Updated on: Nov 02, 2024 | 4:49 PM

ಚಿಂತಾಮಣಿ ತಾಲ್ಲೂಕಿನ ಸಂತೇಕಲ್ಲಹಳ್ಳಿ ಬಳಿ ಗ್ಯಾಸ್ ಸಿಲಿಂಡರ್‌ಗಳನ್ನು ತುಂಬಿದ ಲಾರಿ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರು ಸ್ಥಳಕ್ಕೆ ಧಾವಿಸಿ, ಆ್ಯಂಬುಲೆನ್ಸ್‌ಗಳನ್ನು ಕರೆಸಿ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ರವಾನಿಸಿದ್ದಾರೆ.

ಚಿಕ್ಕಬಳ್ಳಾಪುರ, ನವೆಂಬರ್​ 02: ಗ್ಯಾಸ್ ಸಿಲಿಂಡರ್‌ಗಳು ತುಂಬಿದ್ದ ಲಾರಿ ಮತ್ತು ಬಸ್​ ಮಧ್ಯೆ ಡಿಕ್ಕಿ (Collision) ಪಡೆದ ಪರಿಣಾಮ ಬಸ್​ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕು ಸಂತೇಕಲ್ಲಹಳ್ಳಿ ಬಳಿ ನಡೆದಿದೆ. ಅದೇ ರಸ್ತೆಯಲ್ಲಿ ತೆರಳುತ್ತಿದ್ದ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್​ ಸ್ಥಳಕ್ಕೆ ಧಾವಿಸಿ ಆ್ಯಂಬುಲೆನ್ಸ್‌ಗಳನ್ನು ಕರೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕಳಿಸಿದ್ದಾರೆ. ಆ ಮೂಲಕ ಮಾನವೀಯತೆ ಮೆರೆದಿದ್ದಾರೆ. ಗಾಯಾಳುಗಳನ್ನು ಚಿಂತಾಮಣಿ, ಹೊಸಕೋಟೆ ಆಸ್ಪತ್ರೆಗಳಿಗೆ ರವಾನೆ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.