AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀಗಳು ಹಾಗೂ ಡಿಕೆಶಿ ದಂಪತಿ!

ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀಗಳು ಹಾಗೂ ಡಿಕೆಶಿ ದಂಪತಿ!

ಅಕ್ಷತಾ ವರ್ಕಾಡಿ
|

Updated on: Oct 11, 2026 | 12:38 PM

Share

ನಾಡಹಬ್ಬ ಮೈಸೂರು ದಸರಾ 2022ಕ್ಕೆ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಯವರು ಚಾಮುಂಡೇಶ್ವರಿ ದರ್ಶನ ಪಡೆದು, ಅಗ್ರಪೂಜೆ ಸಲ್ಲಿಸುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಪರಂಪರೆ, ಪ್ರಗತಿ, ಭಕ್ತಿ, ಶಕ್ತಿಯ ಸಂಕೇತವಾಗಿರುವ ಈ ಹಬ್ಬವು ಯುವ, ಮಹಿಳಾ, ರೈತ ದಸರಾ ಸೇರಿದಂತೆ ಹಲವು ಉತ್ಸವಗಳನ್ನು ಒಳಗೊಂಡಿದ್ದು, ಎಲ್ಲ ವಯೋಮಾನದವರನ್ನೂ ಆಕರ್ಷಿಸುತ್ತದೆ.

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಅಗ್ರಪೂಜೆ ಸಲ್ಲಿಸುವ ಮೂಲಕ ವಿಧ್ಯುಕ್ತ ಚಾಲನೆ ದೊರೆತಿದೆ. ಗವಿಸಿದ್ದೇಶ್ವರ ಮಹಾಸ್ವಾಮೀಜಿಯವರು ನಾಡಹಬ್ಬವನ್ನು ಉದ್ಘಾಟಿಸಿ, ದೇವಿಯ ಕೃಪೆಯಿಂದ ನಾಡಿನಲ್ಲಿ ಉತ್ತಮ ಮಳೆ-ಬೆಳೆಯಾಗಿ ಪ್ರತಿಯೊಬ್ಬರ ಬಾಳಿನಲ್ಲೂ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಲಿ ಎಂದು ಭಕ್ತಿಪೂರ್ವಕವಾಗಿ ಪ್ರಾರ್ಥಿಸಿದರು. ಈ ಅಭೂತಪೂರ್ವ ಕ್ಷಣಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರು ಸಾಕ್ಷಿಯಾಗಿದ್ದು, ದಸರಾ ಉದ್ಘಾಟನೆಗೂ ಮುನ್ನವೇ ತಾಯಿ ಚಾಮುಂಡೇಶ್ವರಿಯ ವಿಶೇಷ ದರ್ಶನ ಪಡೆದು, ಗವಿಸಿದ್ದೇಶ್ವರ ಶ್ರೀಗಳ ಆಶೀರ್ವಾದ ಪಡೆದರು. ಇನ್ನು, ಉದ್ಘಾಟನಾ ಕಾರ್ಯಕ್ರಮದ ಸುಗಮ ನಿರ್ವಹಣೆಗಾಗಿ ಚಾಮುಂಡಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಸೂಕ್ತ ಪಾಸ್ ಹೊಂದಿದ್ದವರಿಗೆ ಮಾತ್ರ ಪ್ರವೇಶಾವಕಾಶ ನೀಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More