ಕರ್ನಾಟಕ ವಿಧಾನ ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ

Edited By:

Updated on: Aug 07, 2026 | 2:36 PM

Gayatri Shantegowda: ಗಾಯತ್ರಿ ಶಾಂತೇಗೌಡ ಅವರು ವಿಧಾನ ಪರಿಷತ್ ಸದಸ್ಯೆಯಾಗಿ ಪ್ರಮಾಣವಚನ ಸ್ವೀಕರಿಸಿದರು. ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಈ ಮಹತ್ವದ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಬೆಂಗಳೂರು, ಆಗಸ್ಟ್​​ 07: ಗಾಯತ್ರಿ ಶಾಂತೇಗೌಡ ಅವರು ವಿಧಾನ ಪರಿಷತ್ ಸದಸ್ಯೆಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಧಾನಸೌಧದ ಸಭಾಪತಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಗಾಯತ್ರಿ ಶಾಂತೇಗೌಡ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಅವರು ಸೇರಿದಂತೆ ಹಲವು ಗಣ್ಯರು ಸಾಕ್ಷಿಯಾದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More