ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡಿದ್ದು ಇವರೇ
ಸಿಎಂ ಡಿ.ಕೆ ಶಿವಕುಮಾರ್ ಹಾಗೂ ಆಶಾ ಕಾರ್ಯಕರ್ತೆಯರ ನಡುವಿನ ಸಂಧಾನ ಸಭೆ ಯಶಸ್ವಿಯಾಗಿದೆ. 2,000 ರೂ. ಪ್ರೋತ್ಸಾಹ ಧನ ಹೆಚ್ಚಳ ಮಾಡುವ ಸಿಎಂ ಭರವಸೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಕೊಂಡಿದ್ದಾರೆ. ಇದರೊಂದಿಗೆ ಆಶಾ ಕಾರ್ಯಕರ್ತೆಯರು ಕಳೆದ 12 ದಿನಗಳಿಂದ ನಡೆಸುತ್ತಿದ್ದ ಧರಣಿ ಕೊನೆಗೂ ಅಂತ್ಯವಾಗಿದೆ. ಇನ್ನು ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡಿದ್ದು ಜಿಸಿ ಚಂದ್ರಶೇಖರ್.
ಬೆಂಗಳೂರು, ನವೆಂಬರ್ 28: ಸಿಎಂ ಡಿ.ಕೆ ಶಿವಕುಮಾರ್ ಹಾಗೂ ಆಶಾ ಕಾರ್ಯಕರ್ತೆಯರ ನಡುವಿನ ಸಂಧಾನ ಸಭೆ ಯಶಸ್ವಿಯಾಗಿದೆ. 2,000 ರೂ. ಪ್ರೋತ್ಸಾಹ ಧನ ಹೆಚ್ಚಳ ಮಾಡುವ ಸಿಎಂ ಭರವಸೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಕೊಂಡಿದ್ದಾರೆ. ಇದರೊಂದಿಗೆ ಆಶಾ ಕಾರ್ಯಕರ್ತೆಯರು ಕಳೆದ 12 ದಿನಗಳಿಂದ ನಡೆಸುತ್ತಿದ್ದ ಧರಣಿ ಕೊನೆಗೂ ಅಂತ್ಯವಾಗಿದೆ. ಇನ್ನು ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡಿದ್ದು ಜಿಸಿ ಚಂದ್ರಶೇಖರ್.
ಹೌದು….ಸಿಎಂ ರಾಜಕೀಯ ಪ್ರಧಾನ ಸಲಹೆಗಾರ ಜಿ.ಸಿ.ಚಂದ್ರಶೇಖರ್ ಅವರು ಆರೋಗ್ಯ ಸಚಿವ ಯುಟಿ ಖಾದರ್ ಹಾಗೂ ಸಿಎಂ ಡಿಕೆ ಶಿವಕುಮಾರ್ ಸಲಹೆ ಮೇರೆಗೆ ಆಶಾ ಕಾರ್ಯಕರ್ತೆಯರ ಜೊತೆ ನಿರಂತರ ಸಭೆ ಮಾಡಿದ್ದರು. ಸಿಎಂ ಜಪಾನ್ಗೆ ತೆರಳಿದ್ದಾಗಲೂ ಸಹ ಚಂದ್ರಶೇಖರ್ ಅವರು ಆಶಾ ಕಾರ್ಯಕರ್ತರನ್ನು ಮನವೊಲಿಸುವ ಕಸರತ್ತು ಮಾಡಿದ್ದರು. ಅಲ್ಲದೇ ಇಂಚಿಂಚು ಮಾಹಿತಿ ಸಹ ಸಿಎಂಗೆ ಮುಟ್ಟಿಸಿದ್ದು, ಅಂತಿಮವಾಗಿ ಸರ್ಕಾರ ಹಾಗೂ ಆಶಾ ಕಾರ್ಯಕರ್ತೆಯರ ನಡುವಿನ ಸಂಧಾನ ಮಾಡಿಸುವಲ್ಲಿ ಚಂದ್ರಶೇಖರ್ ಅವರು ಸಂಪರ್ಕ ಕೊಂಡಿಯಾಗಿ ಕಾರ್ಯನಿರ್ವಹಿಸಿದ್ದಾರೆ.

