ಸಿದ್ದಗಂಗಾ ಮಠಕ್ಕೆ ಶಿವಣ್ಣ, ಗೀತಾ ಭೇಟಿ; ಫೋಟೋಗಾಗಿ ಮುಗಿಬಿದ್ದ ಅಭಿಮಾನಿಗಳು
ಚುನಾವಣಾ ಪ್ರಚಾರದಲ್ಲಿ ಬ್ಯುಸಿ ಆಗಿರುವ ಶಿವರಾಜ್ಕುಮಾರ್ ಮತ್ತು ಗೀತಾ ಅವರು ಇಂದು (ಏಪ್ರಿಲ್ 28) ತುಮಕೂರಿನ ಸಿದ್ದಗಂಗಾ ಮಠಕ್ಕೆ ತೆರಳಿದ್ದಾರೆ. ಶಿವಕುಮಾರ ಶ್ರೀಗಳ ಗದ್ದುಗೆಯ ದರ್ಶನ ಪಡೆದು ಈ ದಂಪತಿ ಪೂಜೆ ಸಲ್ಲಿಸಿದ್ದಾರೆ. ತಮ್ಮೂರಿಗೆ ಬಂದ ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಈ ಸಂದರ್ಭದ ವಿಡಿಯೋ ಇಲ್ಲಿದೆ..
‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ (Shivarajkumar) ಅವರು ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದು ಈಗ ಚುನಾವಣಾ ಪ್ರಚಾರದಲ್ಲಿ ಸಂಪೂರ್ಣ ಬ್ಯುಸಿ ಆಗಿದ್ದಾರೆ. ಅವರ ಪತ್ನಿ ಗೀತಾ ಈ ಬಾರಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಪತ್ನಿಯ ಪರವಾಗಿ ಶಿವಣ್ಣ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಇದರ ನಡುವೆ ಅವರು ತುಮಕೂರಿನ ಸಿದ್ದಗಂಗಾ ಮಠಕ್ಕೆ (Siddaganga Matha) ಭೇಟಿ ನೀಡಿದ್ದಾರೆ. ಗೀತಾ ಶಿವರಾಜ್ಕುಮಾರ್ (Geetha Shivarajkumar) ಹಾಗೂ ಶಿವರಾಜ್ಕುಮಾರ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಅವರ ಜೊತೆ ಫೋಟೋ ತೆಗೆಸಿಕೊಂಡು ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಶಿವರಾಜ್ಕುಮಾರ್ ಅವರಿಗೆ ಎಲ್ಲ ವಯೋಮಾನದ ಅಭಿಮಾನಿಗಳು ಇದ್ದಾರೆ. ಯುವಕ-ಯುವತಿಯರು, ವೃದ್ಧರು, ಮಹಿಳೆಯರು ತಮ್ಮ ನೆಚ್ಚಿನ ನಟ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಖುಷಿಪಟ್ಟಿದ್ದಾರೆ. ಗೀತಾ ಹಾಗೂ ಶಿವರಾಜ್ಕುಮಾರ್ ಅವರು ಸಿದ್ದಲಿಂಗ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದು ಅವರು ಪೂಜೆ ಸಲ್ಲಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು

