ಸಿದ್ದಗಂಗಾ ಮಠಕ್ಕೆ ಶಿವಣ್ಣ, ಗೀತಾ ಭೇಟಿ; ಫೋಟೋಗಾಗಿ ಮುಗಿಬಿದ್ದ ಅಭಿಮಾನಿಗಳು

Updated on: Apr 28, 2024 | 1:23 PM

ಚುನಾವಣಾ ಪ್ರಚಾರದಲ್ಲಿ ಬ್ಯುಸಿ ಆಗಿರುವ ಶಿವರಾಜ್​ಕುಮಾರ್​ ಮತ್ತು ಗೀತಾ ಅವರು ಇಂದು (ಏಪ್ರಿಲ್​ 28) ತುಮಕೂರಿನ ಸಿದ್ದಗಂಗಾ ಮಠಕ್ಕೆ ತೆರಳಿದ್ದಾರೆ. ಶಿವಕುಮಾರ ಶ್ರೀಗಳ ಗದ್ದುಗೆಯ ದರ್ಶನ ಪಡೆದು ಈ ದಂಪತಿ ಪೂಜೆ ಸಲ್ಲಿಸಿದ್ದಾರೆ. ತಮ್ಮೂರಿಗೆ ಬಂದ ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಈ ಸಂದರ್ಭದ ವಿಡಿಯೋ ಇಲ್ಲಿದೆ..

‘ಹ್ಯಾಟ್ರಿಕ್​​ ಹೀರೋ’ ಶಿವರಾಜ್​ಕುಮಾರ್​ (Shivarajkumar) ಅವರು ಸಿನಿಮಾ ಕೆಲಸಗಳಿಂದ ಬ್ರೇಕ್​ ಪಡೆದು ಈಗ ಚುನಾವಣಾ ಪ್ರಚಾರದಲ್ಲಿ ಸಂಪೂರ್ಣ ಬ್ಯುಸಿ ಆಗಿದ್ದಾರೆ. ಅವರ ಪತ್ನಿ ಗೀತಾ ಈ ಬಾರಿ ಶಿವಮೊಗ್ಗದಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಪತ್ನಿಯ ಪರವಾಗಿ ಶಿವಣ್ಣ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಇದರ ನಡುವೆ ಅವರು ತುಮಕೂರಿನ ಸಿದ್ದಗಂಗಾ ಮಠಕ್ಕೆ (Siddaganga Matha) ಭೇಟಿ ನೀಡಿದ್ದಾರೆ. ಗೀತಾ ಶಿವರಾಜ್​ಕುಮಾರ್​ (Geetha Shivarajkumar) ಹಾಗೂ ಶಿವರಾಜ್​ಕುಮಾರ್​ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಅವರ ಜೊತೆ ಫೋಟೋ ತೆಗೆಸಿಕೊಂಡು ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಶಿವರಾಜ್​ಕುಮಾರ್​ ಅವರಿಗೆ ಎಲ್ಲ ವಯೋಮಾನದ ಅಭಿಮಾನಿಗಳು ಇದ್ದಾರೆ. ಯುವಕ-ಯುವತಿಯರು, ವೃದ್ಧರು, ಮಹಿಳೆಯರು ತಮ್ಮ ನೆಚ್ಚಿನ ನಟ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಖುಷಿಪಟ್ಟಿದ್ದಾರೆ. ಗೀತಾ ಹಾಗೂ ಶಿವರಾಜ್​​ಕುಮಾರ್​ ಅವರು ಸಿದ್ದಲಿಂಗ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದು ಅವರು ಪೂಜೆ ಸಲ್ಲಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More