ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ ಬಾಲಿ

Updated By: ಮದನ್​ ಕುಮಾರ್​

Updated on: Sep 05, 2025 | 3:54 PM

ವಿಷ್ಣುವರ್ಧನ್ ಅವರ ಸಮಾಧಿ ಇದ್ದ ಅಭಿಮಾನ್ ಸ್ಟುಡಿಯೋ ಜಾಗ ಮೊದಲಿನಿಂದಲೂ ವಿವಾದದ ಕೇಂದ್ರ ಬಿಂದು ಆಗಿದೆ. ಆ ಬಗ್ಗೆ ಬಾಲಕೃಷ್ಣ ಅವರ ಪುತ್ರಿ ಗೀತಾ ಬಾಲಿ ಮಾತನಾಡಿದ್ದಾರೆ. ಈ ಮೊದಲು ಅಭಿಮಾನ್ ಸ್ಟುಡಿಯೋದ 10 ಎಕರೆ ಜಾಗವನ್ನು ಮಾರಾಟ ಮಾಡಲಾಗಿತ್ತು. ಆ ಕುರಿತು ಗೀತಾ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ನಟ ವಿಷ್ಣುವರ್ಧನ್ (Vishnuvardhan) ಅವರ ಸಮಾಧಿ ಇದ್ದ ಅಭಿಮಾನ್ ಸ್ಟುಡಿಯೋ (Abhiman Studio) ಜಾಗ ಮೊದಲಿನಿಂದಲೂ ವಿವಾದದ ಕೇಂದ್ರ ಬಿಂದು ಆಗಿದೆ. ಆ ಬಗ್ಗೆ ಬಾಲಕೃಷ್ಣ ಅವರ ಪುತ್ರಿ ಗೀತಾ ಬಾಲಿ (Geetha Bali) ಮಾತನಾಡಿದ್ದಾರೆ. ಈ ಮೊದಲು ಅಭಿಮಾನ್ ಸ್ಟುಡಿಯೋದ 10 ಎಕರೆ ಜಾಗವನ್ನು ಮಾರಾಟ ಮಾಡಲಾಗಿತ್ತು. ಆ ಕುರಿತು ಗೀತಾ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಜಾಗ ಮಾರಾಟಕ್ಕೆ ಆಗಿನ ಸರ್ಕಾರವೇ ಕೈ ಜೋಡಿಸಿತ್ತು. ನಾನು ಮಾರಾಟ ಮಾಡಿಕೊಂಡಿಲ್ಲ. ಅದು ಸರ್ಕಾರದ ಕೈವಾಡ. 2003ರಲ್ಲಿ ಅವ್ಯವಹಾರ ನಡೆದಿದೆ ಎಂಬುದನ್ನು ಬಹಿರಂಗವಾಗಿ ಹೇಳುತ್ತೇನೆ’ ಎಂದಿದ್ದಾರೆ ಗೀತಾ ಬಾಲಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.