Geetha Shivarajkumar: ಚುನಾವಣಾ ರಾಜಕೀಯದ ಬಗ್ಗೆ ಗೀತಾ ಶಿವರಾಜ್ ಕುಮಾರ್ ಮಹತ್ವದ ಘೋಷಣೆ
ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಚುನಾವಣಾ ರಾಜಕೀಯದ ಬಗ್ಗೆ ಶನಿವಾರ ಮಹತ್ವದ ಘೋಷಣೆ ಮಾಡಿದ್ದಾರೆ. ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿರುವ ಅವರು, ಪಕ್ಷದ ಪರ ಅಭಿಯಾನ ನಡೆಸುವುದಾಗಿಯೂ, ಮಹಿಳೆಯರ ಪರ ಕೆಲಸ ಮಾಡುವುದಾಗಿಯೂ ತಿಳಿಸಿದ್ದಾರೆ.
ಶಿವಮೊಗ್ಗ, ಸೆಪ್ಟೆಂಬರ್ 27: ಇನ್ನು ಮುಂದೆ ನಾನು ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಗೀತಾ ಶಿವರಾಜ್ ಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಶ್ವೇತಾ ಬಂಡಿ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣೆಗೆ ಸ್ಪರ್ಧಿಸಲ್ಲ, ಆದರೆ ನಿಮ್ಮೆಲ್ಲರ ಜೊತೆಗೆ ನಿಂತಿರುತ್ತೇನೆ. ಮುಂದಿನ ಚುನಾವಣೆಗೆ ಬಂದು ಕ್ಯಾಂಪೇನ್ ಮಾಡುತ್ತೇನೆ. ಚುನಾವಣೆಯಲ್ಲಿ ಸ್ಪರ್ಧಿಸಿ ಮಂಜುನಾಥ ಭಂಡಾರಿಗೂ ನಾನು ತೊಂದರೆ ಕೊಡುವುದಿಲ್ಲ ಎಂದರು.
ಮಹಿಳೆಯರು ಎಂದಿಗೂ ಅಬಲೆಯರಲ್ಲ, ಎಲ್ಲರೂ ಸಬಲೆಯರೇ. ಮಹಿಳೆಯರಿಗೆ ಶಕ್ತಿ ನೀಡಿದರೆ ಎಂತಹ ಕೆಲಸವನ್ನಾದರೂ ಮಾಡುತ್ತಾರೆ. ಕಳೆದ ಹತ್ತು ವರ್ಷಗಳಿಂದ ಶ್ವೇತಾ ಬಂಡಿಯನ್ನು ನಾನು ಬಲ್ಲೆ. ನಿಮ್ಮ ಕಷ್ಟಗಳಿಗೆ ನಾನು ಸ್ಪಂದಿಸುತ್ತೇನೆ. ಏನೇ ಕಷ್ಟವಿದ್ದರೂ ಮಧು ಬಂಗಾರಪ್ಪ ಹಿಡಿದುಕೊಂಡು ಕೆಲಸ ಮಾಡಿಸಿಕೊಳ್ಳಿ ಎಂದು ಗೀತಾ ಶಿವರಾಜ್ ಕುಮಾರ್ ಹೇಳಿದರು.
ಮತ್ತಷ್ಟು ವಿಡಿಯೋಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
