Loading video

‘ಭೈರತಿ ರಣಗಲ್’ ಸಿನಿಮಾ ನೋಡಿದ ಗೀತಾ ಶಿವರಾಜ್ ಕುಮಾರ್ ಮೊದಲ ರಿಯಾಕ್ಷನ್

|

Updated on: Nov 15, 2024 | 10:34 AM

ಶಿವರಾಜ್ ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಇಂದು (ನವೆಂಬರ್ 15) ಬಿಡುಗಡೆ ಆಗಿದೆ. ಬೆಳಿಗ್ಗೆ ಆರು ಗಂಟೆಗೆ ಅಭಿಮಾನಿಗಳು ಸಿನಿಮಾ ವೀಕ್ಷಿಸಿದ್ದಾರೆ. ಸಿನಿಮಾ ನಿರ್ಮಾಪಕಿಯೂ ಆದ ಗೀತಾ ಶಿವರಾಜ್ ಕುಮಾರ್ ಅವರೂ ಸಹ ಅಭಿಮಾನಿಗಳೊಟ್ಟಿಗೆ ಕೂತು ಸಿನಿಮಾ ನೋಡಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಶಿವರಾಜ್ ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಇಂದು (ನವೆಂಬರ್ 15) ಬೆಳ್ಳಂಬೆಳಿಗ್ಗೆ ಬಿಡುಗಡೆ ಆಗಿದೆ. ಬೆಳಿಗ್ಗೆ ಆರು ಗಂಟೆಗೆ ಅಭಿಮಾನಿಗಳು ಚಿತ್ರಮಂದಿರದ ಮುಂದೆ ಪಟಾಕಿ ಹೊಡೆದು, ಡೊಳ್ಳು ಭಾರಿಸಿ, ಕುಣಿದು ಸಂಭ್ರಮ ಆಚರಿಸಿ ಸಿನಿಮಾ ವೀಕ್ಷಿಸಿದ್ದಾರೆ. ಸಿನಿಮಾದ ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್ ಸಹ ಬೆಳ್ಳಂಬೆಳಿಗ್ಗೆ ಅಭಿಮಾನಿಗಳೊಟ್ಟಿಗೆ ಸಿನಿಮಾ ವೀಕ್ಷಣೆ ಮಾಡಿದರು. ಮೊದಲ ಶೋ ನೋಡಿದ ಗೀತಾ ಶಿವರಾಜ್ ಕುಮಾರ್ ಅವರು ಸಿನಿಮಾ ನೋಡಿ ತಮಗೆ ಅನಿಸಿದ್ದು ಏನು ಎಂದು ಮೊದಲ ವಿಮರ್ಶೆಯನ್ನು ಟಿವಿ9 ಜೊತೆಗೆ ಹಂಚಿಕೊಂಡಿದ್ದಾರೆ. ಶಿವಣ್ಣನ ಅಭಿನಯ, ನರ್ತನ್​ರ ನಿರ್ದೇಶನದ ಬಗ್ಗೆ ಗೀತಾ ಶಿವರಾಜ್ ಕುಮಾರ್ ಮಾತನಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 15, 2024 10:15 AM