ಗೀತಾ ಶಿವರಾಜ್ಕುಮಾರ್ (Geetha Shivarajkumar) ಶಿವಮೊಗ್ಗದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಅವರಿಗೆ ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಕ್ಕಿದೆ. ‘ಚಲನಚಿತ್ರದ ಪರವಾಗಿ ನಾನು ಧ್ವನಿ ಆಗುತ್ತೇನೆ. ಶಿವಮೊಗ್ಗದ ಪರವಾಗಿ ನಿಲ್ಲುತ್ತೇನೆ. ಮಹಿಳೆಯರ ಪರವಾಗಿ ನಾನು ನಿಲ್ಲುತ್ತೇನೆ’ ಎಂದಿದ್ದಾರೆ ಗೀತಾ ಶಿವರಾಜ್ಕುಮಾರ್. ಈಗಾಗಲೇ ಗೀತಾ ಶಿವರಾಜ್ಕುಮಾರ್ ಅವರಿಗೆ ನಿರ್ಮಾಪಕರ ಸಂಘದಿಂದ ಬೆಂಬಲ ಸಿಕ್ಕಿದೆ. ಶಿವಮೊಗ್ಗದಲ್ಲಿ ಬಿಜೆಪಿಯಿಂದ ಬಿವೈ ರಾಘವೇಂದ್ರ ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿ ಈಶ್ವರಪ್ಪ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಈ ಕಾರಣದಿಂದ ಸ್ಪರ್ಧೆ ಹೆಚ್ಚು ಆಸಕ್ತಿದಾಯಕ ಎನಿಸಿಕೊಂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ