Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೆಲ್ಲ ಗೀತಕ್ಕನಿಗೆ ವೋಟು ಮಾಡಲಿದ್ದಾರೆ: ಮಧು ಬಂಗಾರಪ್ಪ, ಸಚಿವ

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೆಲ್ಲ ಗೀತಕ್ಕನಿಗೆ ವೋಟು ಮಾಡಲಿದ್ದಾರೆ: ಮಧು ಬಂಗಾರಪ್ಪ, ಸಚಿವ

ಅರುಣ್​ ಕುಮಾರ್​ ಬೆಳ್ಳಿ
|

Updated on: May 02, 2024 | 10:35 AM

ತಮ್ಮ ಸರ್ಕಾರ ನುಡಿದಂತೆ ನಡೆದಿರುವುದರಿಂದ ಅದರ ಮೇಲೆ ಜನರಿಗೆ ವಿಶ್ವಾಸ ಬಂದಿದೆ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೆಲ್ಲ ನಿಸ್ಸಂದೇಹವಾಗಿ ಕಾಂಗ್ರೆಸ್ ಪರ ಮತ ಚಲಾಯಿಸಲಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದರು. ಹಳೆಯ ನೀರು ಹೊಲಸಾಗಿರುವುದರಿಂದ ಜನ ಹೊಸ ನೀರಿಗಾಗಿ ತವಕಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಶಿವಮೊಗ್ಗ: ನಗರಕ್ಕೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಆಗಮಿಸಲಿದ್ದು ಕಾರ್ಯಕ್ರಮದ ಸಿದ್ಧತೆಯಲ್ಲಿ ತೊಡಗಿರುವ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ಟಿವಿ9 ವರದಿಗಾರನೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಅವರ ಸಹೋದರಿ ಗೀತಾ ಶಿವರಾಜಕುಮಾರ್ (Geetha Shivaraj Kumar) ಅವರು ಸ್ಪಷ್ಟ ಬಹುಮತದೊಂದಿಗೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆಯೇನೂ ಇಲ್ಲ, ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿಗಳು ಕೇವಲ ತಮ್ಮ ಸ್ವಾರ್ಥಕ್ಕಾಗಿ ಕಚ್ಚಾಡುತ್ತಿದ್ದಾರೆ, ಅದರೆ ಗೀತಕ್ಕ ತಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಆಧಾರದಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ, ತಮ್ಮ ಸರ್ಕಾರ ನುಡಿದಂತೆ ನಡೆದಿರುವುದರಿಂದ ಅದರ ಮೇಲೆ ಜನರಿಗೆ ವಿಶ್ವಾಸ ಬಂದಿದೆ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೆಲ್ಲ ನಿಸ್ಸಂದೇಹವಾಗಿ ಕಾಂಗ್ರೆಸ್ ಪರ ಮತ ಚಲಾಯಿಸಲಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದರು. ಹಳೆಯ ನೀರು ಹೊಲಸಾಗಿರುವುದರಿಂದ ಜನ ಹೊಸ ನೀರಿಗಾಗಿ ತವಕಿಸುತ್ತಿದ್ದಾರೆ, ನಿರ್ದಿಷ್ಟವಾಗಿ ಇಷ್ಟೇ ಮತಗಳ ಅಂತರದಿಂದ ಗೆಲ್ಲುತ್ತಾರೆ ಅಂತ ಹೇಳಲಾಗಲ್ಲ, ಅದರೆ ನಿಶ್ಚಿತವಾಗಿ ಉತ್ತಮ ಮಾರ್ಜಿನ್ ನೊಂದಿಗೆ ಗೀತಕ್ಕ ಗೆಲ್ಲಲಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕೆಎಸ್​ ಈಶ್ವರಪ್ಪ ಡಮ್ಮಿ ಅಭ್ಯರ್ಥಿ ಎಂದ ಆಯನೂರು ಮಂಜುನಾಥ್, ಮಧು ಬಂಗಾರಪ್ಪ