AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಈ ವಿಡಿಯೋದಲ್ಲಿದೆ ಪೂರ್ತಿ ವಿವರ

‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಈ ವಿಡಿಯೋದಲ್ಲಿದೆ ಪೂರ್ತಿ ವಿವರ

ಮದನ್​ ಕುಮಾರ್​
|

Updated on: Aug 10, 2026 | 9:26 PM

Share

‘ಟಾಕ್ಸಿಕ್’ ಸಿನಿಮಾಗೆ ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡಿದ್ದಾರೆ. ಅವರ ಹಿನ್ನೆಲೆ ಏನು ಎಂಬ ಕುತೂಹಲ ಹಲವರಿಗೆ ಇದೆ. ಆ ಪ್ರಶ್ನೆಗೆ ಈ ವಿಡಿಯೋದಲ್ಲಿದೆ ಉತ್ತರ. ಗೀತು ಮೋಹನ್​ದಾಸ್ ಅವರಿಗೆ ಚಿತ್ರರಂಗದ ನಂಟು ಬಾಲ್ಯದಿಂದಲೇ ಇದೆ. ಈವರೆಗಿನ ಅವರ ಸಿನಿಮಾ ಪಯಣದ ಬಗ್ಗೆ ಪ್ರಮುಖ ವಿವರ ಇಲ್ಲಿದೆ.

‘ಟಾಕ್ಸಿಕ್’ ಸಿನಿಮಾಗೆ ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡಿದ್ದಾರೆ. ಅವರ ಹಿನ್ನೆಲೆ ಏನು ಎಂಬ ಕುತೂಹಲ ಹಲವರಿಗೆ ಇದೆ. ಆ ಪ್ರಶ್ನೆಗೆ ಈ ವಿಡಿಯೋದಲ್ಲಿದೆ ಉತ್ತರ. ಗೀತು ಮೋಹನ್​ದಾಸ್ (Geetu Mohandas) ಅವರಿಗೆ ಚಿತ್ರರಂಗದ ನಂಟು ಬಾಲ್ಯದಿಂದಲೇ ಇದೆ. ಮೊದಲು ಅವರು ಬಾಲನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಆಗ ಅವರಿಗೆ ಕೇವಲ 5 ವರ್ಷ ವಯಸ್ಸು. ಬಳಿಕ ಅವರು ಹೀರೋಯಿನ್ ಆಗಿ ಮಿಂಚಿದರು. ನಂತರ ನಿರ್ದೇಶಕಿಯಾಗಿ, ನಿರ್ಮಾಪಕಿಯಾಗಿ ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡರು. ಈಗ ಅವರು ‘ಟಾಕ್ಸಿಕ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಟ್ರೇಲರ್ ನೋಡಿದ ಎಲ್ಲರೂ ಭೇಷ್ ಎನ್ನುತ್ತಿದ್ದಾರೆ. ಈ ಸಿನಿಮಾದಲ್ಲಿ ಯಶ್, ರುಕ್ಮಿಣಿ ವಸಂತ್, ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ ಅವರಂತಹ ಸ್ಟಾರ್ ಕಲಾವಿದರಿಗೆ ಗೀತು ಮೋಹನ್​ದಾಸ್ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ಆಗಸ್ಟ್ 26ರಂದು ವಿಶ್ವಾದ್ಯಂತ ಈ ಚಿತ್ರ ತೆರೆಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More