Video: ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್, 19ರ ಯುವತಿ ಸಾವು
ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಭೀಕರ ಬೈಕ್ ಅಪಘಾತ ಸಂಭವಿಸಿದೆ. ಅತಿವೇಗದ ಯಮಹಾ R15 ಚಲಾಯಿಸುತ್ತಿದ್ದ 19 ವರ್ಷದ ಇಕ್ರಾ ಸ್ಥಳದಲ್ಲೇ ಮೃತಪಟ್ಟಿದ್ದು, ಜೊತೆಗಿದ್ದ ಹಾಶಿಮ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾಶಿಮ್ ಬೈಕ್ ಚಾಲನೆಯ ವಿಡಿಯೋ ಚಿತ್ರೀಕರಿಸುತ್ತಿದ್ದಾಗ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಈ ವೈರಲ್ ವಿಡಿಯೋ ರಸ್ತೆ ಸುರಕ್ಷತೆಯ ಮಹತ್ವವನ್ನು ಎತ್ತಿ ತೋರಿಸುತ್ತದೆ.
ಉತ್ತರ ಪ್ರದೇಶ: ಗಾಜಿಯಾಬಾದ್‌ನಲ್ಲಿ ಭಾನುವಾರ ಬೆಳಿಗ್ಗೆ ಅತಿವೇಗ ಹಾಗೂ ಅಜಾಗರೂಕತೆಯಿಂದಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯುವತಿಯೊಬ್ಬಳು ದುರ್ಮರಣಕ್ಕೀಡಾಗಿದ್ದಾಳೆ. 19 ವರ್ಷದ ಇಕ್ರಾ ಎಂಬ ಯುವತಿ ತನ್ನ ಸ್ನೇಹಿತ ಹಾಶಿಮ್ (20) ಜೊತೆ ಯಮಹಾ ಆರ್-15 ಸ್ಪೋರ್ಟ್ಸ್ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಹಠ ಮಾಡಿ ತಾನೇ ಬೈಕ್ ಓಡಿಸಿದ್ದಾಳೆ. ಇಕ್ರಾ ಅತಿವೇಗವಾಗಿ ಬೈಕ್ ಚಲಾಯಿಸುತ್ತಿದ್ದ ದೃಶ್ಯವನ್ನು ಹಿಂದಕ್ಕೆ ಕುಳಿತಿದ್ದ ಹಾಶಿಮ್ ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದಾಗ, ಬೈಕ್ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಜೋರಾಗಿ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದ ಪರಿಣಾಮವಾಗಿ ಇಕ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡ ಹಾಶಿಮ್ ಪ್ರಸ್ತುತ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗುತ್ತಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 14, 2026 04:53 PM
Loading...
Unable to load recommendations.
Follow Us