AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಹಿಳೆಯನ್ನು ಅಟ್ಟಿಸಿಕೊಂಡು ಬಂದು ದಾಳಿ ನಡೆಸಿದ ಸಾಕು ನಾಯಿಗಳು

Video: ಮಹಿಳೆಯನ್ನು ಅಟ್ಟಿಸಿಕೊಂಡು ಬಂದು ದಾಳಿ ನಡೆಸಿದ ಸಾಕು ನಾಯಿಗಳು

ನಯನಾ ರಾಜೀವ್
|

Updated on: Aug 22, 2025 | 7:47 AM

Share

ನಾಯಿಯೊಂದು ಅಪಾರ್ಟ್​​ಮೆಂಟ್​​ನಲ್ಲಿ ಮಹಿಳೆಯನ್ನು ಓಡಿಸಿಕೊಂಡು ಹೋಗಿ ಕಚ್ಚಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಗಾಜಿಯಾಬಾದ್​​ನಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಅಪಾರ್ಟ್​​ಮೆಂಟ್​​ನ ಕೆಲಸದಾಕೆ ಮೇಲೆ ನಾಯಿಯೊಂದು ದಾಳಿ ಮಾಡಿ ಕಚ್ಚಿದ್ದ ವಿಡಿಯೋ ವೈರಲ್ ಆಗಿತ್ತು, ಅದರ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ. ವಿಡಿಯೋದಲ್ಲಿ ನಾಯಿ ಅಟ್ಟಿಸಿಕೊಂಡು ಬರುತ್ತಿರುವುದು ಹಾಗೂ ಮಹಿಳೆ ಓಡುತ್ತಿರುವುದನ್ನು ಕಾಣಬಹುದು.

ಗಾಜಿಯಾಬಾದ್, ಆಗಸ್ಟ್ 22: ನಾಯಿಗಳು ಅಪಾರ್ಟ್​​ಮೆಂಟ್​​ನಲ್ಲಿ ಮಹಿಳೆಯನ್ನು  ಅಟ್ಟಿಸಿಕೊಂಡು ಹೋಗಿ  ದಾಳಿ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಗಾಜಿಯಾಬಾದ್​​ನಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಅಪಾರ್ಟ್​​ಮೆಂಟ್​​ನ ಕೆಲಸದಾಕೆ ಮೇಲೆ ನಾಯಿಯೊಂದು ದಾಳಿ ಮಾಡಿ ಕಚ್ಚಿದ್ದ ವಿಡಿಯೋ ವೈರಲ್ ಆಗಿತ್ತು, ಅದರ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ. ವಿಡಿಯೋದಲ್ಲಿ ನಾಯಿ ಅಟ್ಟಿಸಿಕೊಂಡು ಬರುತ್ತಿರುವುದು ಹಾಗೂ ಮಹಿಳೆ ಓಡುತ್ತಿರುವುದನ್ನು ಕಾಣಬಹುದು. ಆ ಮಹಿಳೆ ಕಟ್ಟಡದ ಕಾರಿಡಾರ್ ಮೂಲಕ ಓಡುತ್ತಿರುವುದನ್ನು ಕಾಣಬಹುದು. ಎರಡು ನಾಯಿಗಳು ಆಕೆಯನ್ನು ಬೆನ್ನಟ್ಟುತ್ತಿದ್ದವು. ಅದೃಷ್ಟವಶಾತ್ ಒಬ್ಬ ವ್ಯಕ್ತಿ ನಾಯಿಗಳನ್ನು ಓಡಿಸಲು ಮನೆಯಿಂದ ಹೊರಬಂದಿದ್ದರು. ಇದೀಗ ನಾಯಿ ಮಾಲೀಕರ ಮೇಲೆ ಪ್ರಕರಣ ದಾಖಲಾಗಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More