Video: ಮಹಿಳೆಯನ್ನು ಅಟ್ಟಿಸಿಕೊಂಡು ಬಂದು ದಾಳಿ ನಡೆಸಿದ ಸಾಕು ನಾಯಿಗಳು
ನಾಯಿಯೊಂದು ಅಪಾರ್ಟ್ಮೆಂಟ್ನಲ್ಲಿ ಮಹಿಳೆಯನ್ನು ಓಡಿಸಿಕೊಂಡು ಹೋಗಿ ಕಚ್ಚಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಗಾಜಿಯಾಬಾದ್ನಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಅಪಾರ್ಟ್ಮೆಂಟ್ನ ಕೆಲಸದಾಕೆ ಮೇಲೆ ನಾಯಿಯೊಂದು ದಾಳಿ ಮಾಡಿ ಕಚ್ಚಿದ್ದ ವಿಡಿಯೋ ವೈರಲ್ ಆಗಿತ್ತು, ಅದರ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ. ವಿಡಿಯೋದಲ್ಲಿ ನಾಯಿ ಅಟ್ಟಿಸಿಕೊಂಡು ಬರುತ್ತಿರುವುದು ಹಾಗೂ ಮಹಿಳೆ ಓಡುತ್ತಿರುವುದನ್ನು ಕಾಣಬಹುದು.
ಗಾಜಿಯಾಬಾದ್, ಆಗಸ್ಟ್ 22: ನಾಯಿಗಳು ಅಪಾರ್ಟ್ಮೆಂಟ್ನಲ್ಲಿ ಮಹಿಳೆಯನ್ನು ಅಟ್ಟಿಸಿಕೊಂಡು ಹೋಗಿ ದಾಳಿ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಗಾಜಿಯಾಬಾದ್ನಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಅಪಾರ್ಟ್ಮೆಂಟ್ನ ಕೆಲಸದಾಕೆ ಮೇಲೆ ನಾಯಿಯೊಂದು ದಾಳಿ ಮಾಡಿ ಕಚ್ಚಿದ್ದ ವಿಡಿಯೋ ವೈರಲ್ ಆಗಿತ್ತು, ಅದರ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ. ವಿಡಿಯೋದಲ್ಲಿ ನಾಯಿ ಅಟ್ಟಿಸಿಕೊಂಡು ಬರುತ್ತಿರುವುದು ಹಾಗೂ ಮಹಿಳೆ ಓಡುತ್ತಿರುವುದನ್ನು ಕಾಣಬಹುದು. ಆ ಮಹಿಳೆ ಕಟ್ಟಡದ ಕಾರಿಡಾರ್ ಮೂಲಕ ಓಡುತ್ತಿರುವುದನ್ನು ಕಾಣಬಹುದು. ಎರಡು ನಾಯಿಗಳು ಆಕೆಯನ್ನು ಬೆನ್ನಟ್ಟುತ್ತಿದ್ದವು. ಅದೃಷ್ಟವಶಾತ್ ಒಬ್ಬ ವ್ಯಕ್ತಿ ನಾಯಿಗಳನ್ನು ಓಡಿಸಲು ಮನೆಯಿಂದ ಹೊರಬಂದಿದ್ದರು. ಇದೀಗ ನಾಯಿ ಮಾಲೀಕರ ಮೇಲೆ ಪ್ರಕರಣ ದಾಖಲಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ