Ghost Movie: ‘ನಿಜವಾದ ಪ್ಯಾನ್ ಇಂಡಿಯಾ ಸಿನಿಮಾ ಘೋಸ್ಟ್’: ಶಿವಣ್ಣನ ಚಿತ್ರಕ್ಕೆ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯೆ
Shivarajkumar: ‘ಘೋಸ್ಟ್’ ಸಿನಿಮಾ ನೋಡಿ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಫ್ಯಾನ್ಸ್ ಮಾತ್ರವಲ್ಲದೇ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳಿಗೂ ಈ ಸಿನಿಮಾ ಸಖತ್ ಇಷ್ಟ ಆಗಿದೆ. ಇತ್ತೀಚೆಗೆ ಚಿತ್ರದ ಸಕ್ಸಸ್ ಶೋ ಆಯೋಜಿಸಲಾಗಿತ್ತು. ಇದರಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಇಂದ್ರಜಿತ್ ಲಂಕೇಶ್ ಅವರು ಈ ಚಿತ್ರದ ಕುರಿತು ಮಾತನಾಡಿದ್ದಾರೆ.
ಪ್ಯಾನ್ ಇಂಡಿಯಾ ಸಿನಿಮಾಗಳ ಟ್ರೆಂಡ್ ಜೋರಾಗಿದೆ. ಇತ್ತೀಚೆಗೆ ಬಿಡುಗಡೆ ಆದ ‘ಘೋಸ್ಟ್’ ಸಿನಿಮಾ ಕೂಡ ಕನ್ನಡದ ಜೊತೆ ಬೇರೆ ಬೇರೆ ಭಾಷೆಗಳಲ್ಲಿ ತೆರೆಕಂಡಿದೆ. ಈ ಚಿತ್ರದಲ್ಲಿ ಶಿವರಾಜ್ಕುಮಾರ್ (Shivarajkumar) ಅವರು ಎರಡು ಶೇಡ್ ಇರುವ ಪಾತ್ರ ಮಾಡಿದ್ದಾರೆ. ಶ್ರೀನಿ ನಿರ್ದೇಶನದಲ್ಲಿ ಮೂಡಿಬಂದ ‘ಘೋಸ್ಟ್’ ನೋಡಿ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಫ್ಯಾನ್ಸ್ ಮಾತ್ರವಲ್ಲದೇ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳಿಗೂ ಈ ಸಿನಿಮಾ ಸಖತ್ ಇಷ್ಟ ಆಗಿದೆ. ಇತ್ತೀಚೆಗೆ ‘ಘೋಸ್ಟ್’ (Ghost Movie) ಚಿತ್ರದ ಸಕ್ಸಸ್ ಶೋ ಆಯೋಜಿಸಲಾಗಿತ್ತು. ಇದರಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಸಿನಿಮಾ ನೋಡಿದ ಬಳಿಕ ಇಂದ್ರಜಿತ್ ಲಂಕೇಶ್ ಅವರು ತಮ್ಮ ಪ್ರತಿಕ್ರಿಯೆ ತಿಳಿಸಿದ್ದಾರೆ. ‘ಶಿವಣ್ಣ ಅವರ ನಟನೆ ಇಷ್ಟ ಆಯಿತು. ಅವರಿಗೆ ಅವರೇ ಸಾಟಿ. ಶ್ರೀನಿ ಹೊಸ ಯುಗದ ನಿರ್ದೇಶಕ. ಅವರ ನಿರೂಪಣೆ ಶೈಲಿ ಭಿನ್ನವಾಗಿದೆ. ನಮ್ಮ ಆತ್ಮೀಯರಾದ ಸಂದೇಶ್ ನಾಗರಾಜ್ ಅವರು ಈ ಚಿತ್ರ ನಿರ್ಮಿಸಿದ್ದಾರೆ. ಇದು ನಿಜವಾದ ಪ್ಯಾನ್ ಇಂಡಿಯಾ ಸಿನಿಮಾ’ ಎಂದು ಇಂದ್ರಜಿತ್ ಲಂಕೇಶ್ (Indrajit Lankesh) ಹೇಳಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.