AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಘೋಸ್ಟ್ ಮುಂದೆ ಯಾವ ಲಿಯೋನೂ ಇಲ್ಲ’; ಶಿವಣ್ಣನ ಚಿತ್ರಕ್ಕೆ ಮೆಚ್ಚುಗೆಯ ಮಹಾಪೂರ

‘ಘೋಸ್ಟ್ ಮುಂದೆ ಯಾವ ಲಿಯೋನೂ ಇಲ್ಲ’; ಶಿವಣ್ಣನ ಚಿತ್ರಕ್ಕೆ ಮೆಚ್ಚುಗೆಯ ಮಹಾಪೂರ

ರಾಜೇಶ್ ದುಗ್ಗುಮನೆ
|

Updated on: Oct 19, 2023 | 10:24 AM

Share

ಅಕ್ಟೋಬರ್ 18ರ ಮಧ್ಯರಾತ್ರಿ ‘ಘೋಸ್ಟ್’ ಚಿತ್ರಕ್ಕೆ ಫ್ಯಾನ್​ ಶೋ ಆಯೋಜನೆ ಮಾಡಲಾಗಿತ್ತು. ಬೆಂಗಳೂರಿನ ಸಂತೋಷ್ ಥಿಯೇಟರ್​ನಲ್ಲಿ ಸಿನಿಮಾ ಪ್ರದರ್ಶನ ಕಂಡಿದೆ. ಅಭಿಮಾನಿಗಳು ಆಗಮಿಸಿ ಈ ಚಿತ್ರವನ್ನು ಕಣ್ತುಂಬಿಕೊಂಡಿದ್ದಾರೆ.

ಶಿವರಾಜ್​ಕುಮಾರ್ ನಟನೆಯ ‘ಘೋಸ್ಟ್’ ಸಿನಿಮಾ ಇಂದು (ಅಕ್ಟೋಬರ್ 19) ರಿಲೀಸ್ ಆಗಿದೆ. ಶ್ರೀನಿ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರಕ್ಕೆ ಅಕ್ಟೋಬರ್ 18ರ ಮಧ್ಯರಾತ್ರಿ ಫ್ಯಾನ್​ ಶೋ ಆಯೋಜನೆ ಮಾಡಲಾಗಿತ್ತು. ಬೆಂಗಳೂರಿನ ಸಂತೋಷ್ ಥಿಯೇಟರ್​ನಲ್ಲಿ ಸಿನಿಮಾ ಪ್ರದರ್ಶನ ಕಂಡಿದೆ. ಅಭಿಮಾನಿಗಳು ಆಗಮಿಸಿ ಈ ಚಿತ್ರವನ್ನು ಕಣ್ತುಂಬಿಕೊಂಡಿದ್ದಾರೆ. ‘ಶಿವಣ್ಣನ ಘೋಸ್ಟ್ ಸಿನಿಮಾ ಎದುರು ಲಿಯೋನೂ ಇಲ್ಲ’ ಎಂದು ಅಭಿಮಾನಿಗಳು ಹೇಳಿದ್ದಾರೆ. ಇಂದು ದಳಪತಿ ವಿಜಯ್ (Thalapathy Vijay) ನಟನೆಯ ‘ಲಿಯೋ’ ಕೂಡ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಪ್ರೇಕ್ಷಕರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More