‘ಘೋಸ್ಟ್ ಮುಂದೆ ಯಾವ ಲಿಯೋನೂ ಇಲ್ಲ’; ಶಿವಣ್ಣನ ಚಿತ್ರಕ್ಕೆ ಮೆಚ್ಚುಗೆಯ ಮಹಾಪೂರ
ಅಕ್ಟೋಬರ್ 18ರ ಮಧ್ಯರಾತ್ರಿ ‘ಘೋಸ್ಟ್’ ಚಿತ್ರಕ್ಕೆ ಫ್ಯಾನ್ ಶೋ ಆಯೋಜನೆ ಮಾಡಲಾಗಿತ್ತು. ಬೆಂಗಳೂರಿನ ಸಂತೋಷ್ ಥಿಯೇಟರ್ನಲ್ಲಿ ಸಿನಿಮಾ ಪ್ರದರ್ಶನ ಕಂಡಿದೆ. ಅಭಿಮಾನಿಗಳು ಆಗಮಿಸಿ ಈ ಚಿತ್ರವನ್ನು ಕಣ್ತುಂಬಿಕೊಂಡಿದ್ದಾರೆ.
ಶಿವರಾಜ್ಕುಮಾರ್ ನಟನೆಯ ‘ಘೋಸ್ಟ್’ ಸಿನಿಮಾ ಇಂದು (ಅಕ್ಟೋಬರ್ 19) ರಿಲೀಸ್ ಆಗಿದೆ. ಶ್ರೀನಿ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರಕ್ಕೆ ಅಕ್ಟೋಬರ್ 18ರ ಮಧ್ಯರಾತ್ರಿ ಫ್ಯಾನ್ ಶೋ ಆಯೋಜನೆ ಮಾಡಲಾಗಿತ್ತು. ಬೆಂಗಳೂರಿನ ಸಂತೋಷ್ ಥಿಯೇಟರ್ನಲ್ಲಿ ಸಿನಿಮಾ ಪ್ರದರ್ಶನ ಕಂಡಿದೆ. ಅಭಿಮಾನಿಗಳು ಆಗಮಿಸಿ ಈ ಚಿತ್ರವನ್ನು ಕಣ್ತುಂಬಿಕೊಂಡಿದ್ದಾರೆ. ‘ಶಿವಣ್ಣನ ಘೋಸ್ಟ್ ಸಿನಿಮಾ ಎದುರು ಲಿಯೋನೂ ಇಲ್ಲ’ ಎಂದು ಅಭಿಮಾನಿಗಳು ಹೇಳಿದ್ದಾರೆ. ಇಂದು ದಳಪತಿ ವಿಜಯ್ (Thalapathy Vijay) ನಟನೆಯ ‘ಲಿಯೋ’ ಕೂಡ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಪ್ರೇಕ್ಷಕರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ