ರಸ್ತೆ ಅಪಘಾತದ ಬಗ್ಗೆ ಪೊಲೀಸ್​ ಠಾಣೆ ಎದುರು ‘ಗಿಚ್ಚಿ ಗಿಲಿಗಿಲಿ’ ನಟ ಚಂದ್ರಪ್ರಭ ಪ್ರತಿಕ್ರಿಯೆ

Edited By:

Updated on: Sep 08, 2023 | 6:31 PM

ಅಪಘಾತದ ಬಳಿಕ ಬೈಕ್​ ಸವಾರನ ಮೇಲೆ ಚಂದ್ರಪ್ರಭ ಅವರು ಕೆಲವು ಆರೋಪಗಳನ್ನು ಮಾಡಿದ್ದರು. ಆ ವ್ಯಕ್ತಿ ಮದ್ಯಪಾನ ಮಾಡಿದ್ದರು ಎಂದು ಕೂಡ ಅವರು ಆರೋಪಿಸಿದ್ದರು. ಆದರೆ ತಮ್ಮ ಹೇಳಿಕೆಯನ್ನು ಅವರೀಗ ಹಿಂದಕ್ಕೆ ಪಡೆದಿದ್ದಾರೆ. ‘ಯಾರೋ ಹೇಳಿದ್ರು ಅಂತ ನಾನು ಆ ರೀತಿ ಹೇಳಿಕೆ ನೀಡಿದ್ದೆ. ಈಗ ಕ್ಷಮೆ ಕೇಳಿದ್ದೇನೆ’ ಎಂದು ಚಂದ್ರಪ್ರಭ ಹೇಳಿದ್ದಾರೆ.

ಕನ್ನಡ ಕಿರುತೆರೆಯ ಕಾಮಿಡಿ ನಟ (Comedy Actor) ಚಂದ್ರಪ್ರಭ ಅವರು ಹಿಟ್​ ಆ್ಯಂಡ್​ ರನ್​ ಕೇಸ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಇತ್ತೀಚೆಗೆ ಅವರು ಚಿಕ್ಕಮಗಳೂರಿನಲ್ಲಿ ಕಾರು ಚಲಾಯಿಸುತ್ತಿದ್ದಾಗ ಬೈಕ್​ ಸವಾರನಿಗೆ ಡಿಕ್ಕಿ ಹೊಡೆದಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಸೆಪ್ಟೆಂಬರ್​ 8) ಚಿಕ್ಕಮಗಳೂರಿನ ಸಂಚಾರ ಪೊಲೀಸ್​ ಠಾಣೆಗೆ ಚಂದ್ರಪ್ರಭ (Chandraprabha) ಹಾಜರಿ ಹಾಕಿದ್ದಾರೆ. ಈ ವೇಳೆ ‘ಟಿವಿ9 ಕನ್ನಡ’ ಜೊತೆ ಅವರು ಮಾತನಾಡಿದ್ದಾರೆ. ಅಪಘಾತ (Road Accident) ನಡೆದ ಬಳಿಕ ಬೈಕ್​ ಸವಾರನ ಮೇಲೆ ಚಂದ್ರಪ್ರಭ ಅವರು ಕೆಲವು ಆರೋಪಗಳನ್ನು ಮಾಡಿದ್ದರು. ಆ ವ್ಯಕ್ತಿ ಮದ್ಯಪಾನ ಮಾಡಿದ್ದರು ಎಂದು ಕೂಡ ಚಂದ್ರಪ್ರಭ ಆರೋಪಿಸಿದ್ದರು. ಆದರೆ ಆ ಹೇಳಿಕೆಯನ್ನು ಅವರೀಗ ಹಿಂದಕ್ಕೆ ಪಡೆದಿದ್ದಾರೆ. ‘ಯಾರೋ ಹೇಳಿದ್ರು ಅಂತ ನಾನು ಆ ರೀತಿ ಹೇಳಿಕೆ ನೀಡಿದ್ದೆ. ಈಗ ಕ್ಷಮೆ ಕೇಳಿದ್ದೇನೆ. ಆಸ್ಪತ್ರೆಗೆ ಹೋಗಿ ಅವರ ಆರೋಗ್ಯ ವಿಚಾರಿಸುತ್ತೇನೆ’ ಎಂದು ಚಂದ್ರಪ್ರಭ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More