‘ಗಾಯಾಳುನ ಆಸ್ಪತ್ರೆಗೆ ಸೇರಿಸಿ ಬಂದಿದ್ದೇನೆ, ಇದರಲ್ಲಿ ನನ್ನ ತಪ್ಪಿಲ್ಲ’; ಸ್ಪಷ್ಟನೆ ನೀಡಿದ ಹಾಸ್ಯನಟ ಚಂದ್ರಪ್ರಭ

Updated on: Sep 06, 2023 | 11:48 AM

‘ಗಿಚ್ಚಿ ಗಿಲಿಗಿಲಿ’ ಖ್ಯಾತಿಯ ಚಂದ್ರಪ್ರಭ ಅವರ ಮೇಲೆ ಗಂಭಿರ ಆರೋಪ ಒಂದು ಕೇಳಿ ಬಂದಿತ್ತು. ಅವರು ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಪರಾರಿ ಆಗಿದ್ದರು ಎನ್ನುವ ಆರೋಪ ಕೇಳಿ ಬಂದಿತ್ತು. ಚಿಕ್ಕಮಗಳೂರಿನಲ್ಲಿ ಈ ಘಟನೆ ನಡೆದಿತ್ತು. ಇದಕ್ಕೆ ಚಂದ್ರಪ್ರಭ ಅವರು ಟಿವಿ9 ಕನ್ನಡಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

‘ಗಿಚ್ಚಿ ಗಿಲಿಗಿಲಿ’ ಖ್ಯಾತಿಯ ಚಂದ್ರಪ್ರಭ ಅವರ ಮೇಲೆ ಗಂಭಿರ ಆರೋಪ ಒಂದು ಕೇಳಿ ಬಂದಿತ್ತು. ಅವರು ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಪರಾರಿ ಆಗಿದ್ದರು ಎನ್ನುವ ಆರೋಪ ಕೇಳಿ ಬಂದಿತ್ತು. ಚಿಕ್ಕಮಗಳೂರಿನಲ್ಲಿ ಈ ಘಟನೆ ನಡೆದಿತ್ತು. ಇದಕ್ಕೆ ಚಂದ್ರಪ್ರಭ (Chandraprabha) ಅವರು ಟಿವಿ9 ಕನ್ನಡಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ‘ಇಲ್ಲಿ ನನ್ನ ತಪ್ಪಿಲ್ಲ. ನಾನು ಗಾಯಾಳುನ ಚಿಕ್ಕಮಗಳೂರು ಆಸ್ಪತ್ರೆಗೆ ಸೇರಿಸಿದ ಬಳಿಕವೇ ತೆರಳಿದ್ದೇನೆ. ನಾನೇ ಕಾರು ಚಲಾಯಿಸುತ್ತಿದ್ದೆ ಎನ್ನುವ ವಿಚಾರವನ್ನು ಪೊಲೀಸರಿಗೂ ಹೇಳಿದ್ದೆ. ಅವರಿಗೆ ತಿಳಿಸಿ ನಂತರ ಹೊರಟಿದ್ದೆ. ಬೈಕ್ ಸವಾರನಿಗೆ ಗುದ್ದಿ ಹಾಗೆಯೇ ಹೋಗಿದ್ದೇನೆ ಎನ್ನುವ ಆರೋಪ ಸುಳ್ಳು’ ಎಂದಿದ್ದಾರೆ ಚಂದ್ರಪ್ರಭ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More