ಬೆಳಗಾವಿ ಕ್ಷೇತ್ರದಲ್ಲಿ ಗಿಫ್ಟ್​ ಪಾಲಿಟಿಕ್ಸ್​​: ರಮೇಶ್​ ಜಾರಕಿಹೊಳಿ ಆಪ್ತನಿಂದ ಸೀರೆ ಹಂಚಿಕೆ

| Updated By: ವಿವೇಕ ಬಿರಾದಾರ

Updated on: Jan 18, 2023 | 8:58 AM

ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಗಿಫ್ಟ್ ಪಾಲಿಟಿಕ್ಸ್ ಶುರು ಹಚ್ಚಿಕೊಂಡಿವೆ.

ಬೆಳಗಾವಿ: ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Election) ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಒಂದಲ್ಲ ಒಂದು ರಣತಂತ್ರ ರೂಪಿಸುತ್ತಿರುತ್ತವೆ. ಅದರಲ್ಲಿ ಗಿಫ್ಟ್ ಪಾಲಿಟಿಕ್ಸ್​ (Gift Politics) ಕೂಡ ಒಂದು. ಈ ಪದ್ಧತಿ ಅನಾದಿ ಕಾಲದಿಂದ ನಡೆದುಕೊಂಡು ಬಂದಿದ್ದು, ಮತದಾರರನ್ನು ಸೆಳೆಯಲು ಆಮಿಷ ಮಾರ್ಗ ಹಿಡಿದಿದ್ದಾರೆ. ಬೆಳಗಾವಿ (Belagavi) ಗ್ರಾಮಾಂತರ ಕ್ಷೇತ್ರದಲ್ಲಿ ಗಿಫ್ಟ್ ಪಾಲಿಟಿಕ್ಸ್​ ಮುಂದುವರಿದಿದೆ.

ಈ ಹಿಂದೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತೆಂಗಿನ ಕಾಯಿ ಮೇಲೆ ಪ್ರಮಾಣ ಮಾಡಿಸಿಕೊಂಡು ಗಿಫ್ಟ್​ ನೀಡಿದ್ದರು. ಈಗ ಗೋಕಾಕ್​ ಬಿಜೆಪಿ ಶಾಸಕ ರಮೇಶ್​ ಜಾರಕಿಹೊಳಿ (Ramesh Jarkiholi) ಆಪ್ತ ಮತದಾರರ ಓಲೈಕೆಗೆ ಗಿಫ್ಟ್ ಹಂಚಿಕೆ ಮಾಡಿದ್ದಾನೆ. ಹಿಂಡಲಗಾ ಗ್ರಾ.ಪಂ ಅಧ್ಯಕ್ಷ, ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ನಾಗೇಶ್​ ಮನೋಳ್ಕರ್​ನಿಂದ ಗಿಫ್ಟ್ ವಿತರಣೆ ಮಾಡಿದ್ದಾರೆ. ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದಲ್ಲಿ ಮನೋಳ್ಕರ್ ಅರಿಶಿನ ಕುಂಕುಮ ಕಾರ್ಯಕ್ರಮ ನಡೆಸಿ ಮಹಿಳೆಯರಿಗೆ ಸೀರೆ, ಒಂದು ಹಾಟ್ ಬಾಕ್ಸ್ ವಿತರಿಸಿದ್ದಾರೆ. ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಮತದಾರರನ್ನು ಸೆಳೆಯಲು ಕಸರತ್ತು ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ