ಗಿಲ್ಲಿ-ಕಾವ್ಯಾ ಗೆಳೆತನದ ಸುದ್ದಿಗೆ ಬಂದ ರಾಶಿಕಾಗೆ ಮಂಗಳಾರತಿ ಮಾಡಿದ ನಟ

Updated on: Dec 02, 2025 | 10:00 AM

ಗಿಲ್ಲಿ ಹಾಗೂ ಕಾವ್ಯಾ ಶೈವ ಅವರ ಮಧ್ಯೆ ಒಳ್ಳೆಯ ಗೆಳೆತನ ಬಂದಿದೆ. ಇದನ್ನು ಅನೇಕರು ಟಾರ್ಗೆಟ್ ಮಾಡುತ್ತಿದ್ದಾರೆ. ಇದೇ ವಿಷಯ ಇಟ್ಟುಕೊಂಡು ನಾಮಿನೇಟ್ ಕೂಡ ಮಾಡಲಾಗಿದೆ. ಇದು ಕಾವ್ಯಾ ಕೂಪಕ್ಕೆ ಕಾರಣ ಆಗಿದೆ. ಗಿಲ್ಲಿ ಅವರು ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಆ ಸಂದರ್ಭದ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.

ಗಿಲ್ಲಿ ನಟ ಹಾಗೂ ಕಾವ್ಯಾ ಶೈವ ಮಧ್ಯೆ ಒಳ್ಳೆಯ ಗೆಳೆತನ ಮೂಡಿದೆ. ಕಾವ್ಯಾಗೆ ಏನೇ ತೊಂದರೆ ಆದರೂ ಗಿಲ್ಲಿ ಅದಕ್ಕೆ ಸ್ಪಂದಿಸುತ್ತಾರೆ. ಇದೇ ವಿಷಯ ಇಟ್ಟುಕೊಂಡು ರಾಶಿಕಾ ಅವರು ಗಿಲ್ಲಿಯನ್ನು ನಾಮಿನೇಟ್ ಮಾಡಿದ್ದಾರೆ. ಇದು ಗಿಲ್ಲಿ ಕೋಪಕ್ಕೆ ಕಾರಣವಾಗಿದೆ. ರಾಶಿಕಾ ವಿರುದ್ಧ ಅವರು ಧ್ವನಿ ಎತ್ತಿದ್ದಾರೆ. ಅವರು ಆಡೋ ಮಾತಿಗೆ ರಾಶಿಕಾ ಸುಸ್ತಾಗಿದ್ದಾರೆ. ಆ ಸಂದರ್ಭದ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ಆ ಪ್ರೋಮೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Dec 02, 2025 08:56 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More