ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಗಿಲ್ಲಿ ನಟ, ಅಶ್ವಿನಿ ಗೌಡ

Updated on: Feb 22, 2026 | 8:38 AM

‘ಬಿಗ್ ಬಾಸ್ ಕನ್ನಡ 12’ ರಿಯಾಲಿಟಿ ಶೋ ಮುಗಿದು ತಿಂಗಳು ಕಳೆದಿದ್ದರೂ ಸ್ಪರ್ಧಿಗಳ ಹವಾ ಕಮ್ಮಿಯಾಗಿಲ್ಲ. ಅನೇಕ ಕಾರ್ಯಕ್ರಮಗಳಿಗೆ ಅವರು ಅತಿಥಿಗಳಾಗಿ ತೆರಳುತ್ತಿದ್ದಾರೆ. ‘ಹಯಗ್ರೀವ’ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮ ಮಂಡ್ಯದಲ್ಲಿ ನಡೆದಿದೆ. ಆ ವೇದಿಕೆಯಲ್ಲಿ ಅಶ್ವಿನಿ ಗೌಡ, ಗಿಲ್ಲಿ ನಟ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋ ಮುಗಿದು ಹಲವು ದಿನಗಳು ಕಳೆದಿದ್ದರೂ ಕೂಡ ಸ್ಪರ್ಧಿಗಳ ಹವಾ ಕಡಿಮೆ ಆಗಿಲ್ಲ. ಹಲವು ಕಾರ್ಯಕ್ರಮಗಳಿಗೆ ಅವರು ಅತಿಥಿಗಳಾಗಿ ತೆರಳುತ್ತಿದ್ದಾರೆ. ಮಂಡ್ಯದಲ್ಲಿ ‘ಹಯಗ್ರೀವ’ ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮ ನಡೆದಿದೆ. ಆ ವೇದಿಕೆಯಲ್ಲಿ ಅಶ್ವಿನಿ ಗೌಡ (Ashwini Gowda) ಮತ್ತು ಗಿಲ್ಲಿ ನಟ ಅವರ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ‘ಈಗ ನಮ್ಮ ಅತ್ತೆ ಮಗಳು ಮಾತಾಡುತ್ತಾರೆ’ ಎಂದು ಗಿಲ್ಲಿ ನಟ ಅವರು ಅಶ್ವಿನಿಯ ಕಾಲೆಳೆದರು. ‘ಬಿಗ್ ಬಾಸ್ ಬಳಿಕ ಮೊದಲ ಬಾರಿ ಮಾವನ ಮಗನ ಜೊತೆ ವೇದಿಕೆ ಹಂಚಿಕೊಳ್ಳುತ್ತಾ ಇದ್ದೇನೆ. ಖುಷಿ ಆಗುತ್ತಿದೆ. ಹಯಗ್ರೀವ ಸಿನಿಮಾಗೆ ನಿಮ್ಮೆಲ್ಲರ ಪ್ರೀತಿ, ಆಶೀರ್ವಾದ ಇರಲಿ’ ಎಂದು ಅಶ್ವಿನಿ ಗೌಡ ಅವರು ಹೇಳಿದರು. ಮಂಡ್ಯ ಜನರ ಪ್ರೀತಿಗೆ ಗಿಲ್ಲಿ ನಟ (Gilli Nata) ಅವರು ಧನ್ಯವಾದ ತಿಳಿಸಿದರು. ಟ್ರೇಲರ್ ಬಿಡುಗಡೆ ಕಾರ್ಯಕ್ರಮದ ವೇಳೆ ಮಳೆ ಬಂದಿದ್ದು, ಅದನ್ನು ಶುಭ ಸೂಚನೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More