ರಾಶಿಕಾ ಶೆಟ್ಟಿಗೆ ಸಿಕ್ಕಾಪಟ್ಟೆ ಕ್ವಾಟ್ಲೆ ಕೊಟ್ಟ ಗಿಲ್ಲಿ: ನಗು ತಡೆಯಲಾಗದೇ ಕುಳಿತ ರಜತ್

Updated on: Dec 02, 2025 | 6:00 PM

‘ಬಿಗ್ ಬಾಸ್ ಕನ್ನಡ 12’ ಶೋನಲ್ಲಿ ಈ ವಾರದ ನಾಮಿನೇಷನ್ ಪ್ರಕ್ರಿಯೆ ವೇಳೆ ರಾಶಿಕಾ ಶೆಟ್ಟಿ ಹಾಗೂ ಗಿಲ್ಲಿ ನಡುವೆ ಮಾತಿನ ಚಕಮಕಿ ನಡೆಯಿತು. ಗಿಲ್ಲಿ ಬರೀ ಕಾವ್ಯ ಶೈವ ಜತೆ ಹೆಚ್ಚು ಕಾಲ ಕಳೆಯುತ್ತಾರೆ ಎಂಬುದನ್ನೇ ಕಾರಣವಾಗಿ ಇಟ್ಟುಕೊಂಡು ಗಿಲ್ಲಿಯನ್ನು ರಾಶಿಕಾ ಶೆಟ್ಟಿ ನಾಮಿನೇಟ್ ಮಾಡಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋನಲ್ಲಿ ಈ ವಾರದ ನಾಮಿನೇಷನ್ ವೇಳೆ ರಾಶಿಕಾ ಶೆಟ್ಟಿ ಮತ್ತು ಗಿಲ್ಲಿ ನಟ (Gilli Nata) ನಡುವೆ ಮಾತಿನ ಚಕಮಕಿ ನಡೆದಿದೆ. ಗಿಲ್ಲಿ ಅವರು ಬರೀ ಕಾವ್ಯ ಜೊತೆಗೆ ಹೆಚ್ಚು ಕಾಲ ಕಳೆಯುತ್ತಾರೆ ಎಂಬುದನ್ನೇ ಕಾರಣವಾಗಿ ಇಟ್ಟುಕೊಂಡು ಗಿಲ್ಲಿಯನ್ನು ರಾಶಿಕಾ ಶೆಟ್ಟಿ ಅವರು ನಾಮಿನೇಟ್ ಮಾಡಿದ್ದಾರೆ. ಈ ವೇಳೆ ರಾಶಿಕಾಗೆ ಗಿಲ್ಲಿ ತಿರುಗೇಟು ನೀಡಿದ್ದಾರೆ. ಸೂರಜ್ ಸಿಂಗ್ ಅವರು ಬಿಗ್ ಬಾಸ್ ಮನೆಗೆ ಕಾಲಿಟ್ಟಾಗಿನಿಂದಲೂ ಅವರ ಜೊತೆ ರಾಶಿಕಾ ಶೆಟ್ಟಿ ಹೆಚ್ಚು ಕಾಲ ಕಳೆಯುತ್ತಿದ್ದಾರೆ. ಆ ವಿಚಾರವನ್ನು ಗಿಲ್ಲಿ ಕೆದಕಿದ್ದಾರೆ. ಅಲ್ಲದೇ ರಾಶಿಕಾ ಶೆಟ್ಟಿ (Rashika Shetty) ಯಾವ ರೀತಿ ಮಾತನಾಡುತ್ತಾರೆ ಎಂಬುದನ್ನು ಗಿಲ್ಲಿ ಅನುಕರಣೆ ಮಾಡಿ ತೋರಿಸಿದ್ದಾರೆ. ಇದನ್ನೆಲ್ಲ ನೋಡಿದ ವೈಲ್ಡ್ ಕಾರ್ಡ್ ಸ್ಪರ್ಧಿ ರಜತ್ ಅವರಿಗೆ ಸಿಕ್ಕಾಪಟ್ಟೆ ನಗು ಬಂದಿದೆ. ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿರುವ ಡಿಸೆಂಬರ್ 2ರ ಸಂಚಿಕೆಯ ಪ್ರೋಮೋ ಇಲ್ಲಿದೆ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More