ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಅಭಿಮಾನಿಗಳು
ಬಿಗ್ ಬಾಸ್ ಫಿನಾಲೆ ತಲುಪಿರುವ ಗಿಲ್ಲಿ ನಟ ಅವರೇ ಟ್ರೋಫಿ ಗೆಲ್ಲಬೇಕು ಎಂದು ಅಭಿಮಾನಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ. ಶ್ರೀ ಕಾಮಧೇನು ಕ್ಷೇತ್ರದ ಶಿರಡಿ ಸಾಯಿ ದೇವಸ್ಥಾನದಲ್ಲಿ ಗಿಲ್ಲಿ ಫ್ಯಾನ್ಸ್ ಪೂಜೆ ಮಾಡಿಸಿದ್ದಾರೆ. ಗಿಲ್ಲಿಯೇ ಬಿಗ್ ಬಾಸ್ ಗೆಲಲ್ಲಿ ಎಂದು ಪೂಜೆ ಹಾಗೂ ಅರ್ಚನೆ ಮಾಡಿಸಲಾಗಿದೆ.
ಬಿಗ್ ಬಾಸ್ ಮನೆಯಲ್ಲಿ ಫಿನಾಲೆ ತಲುಪಿರುವ ಗಿಲ್ಲಿ ನಟ (Gilli Nata) ಅವರಿಗೆ ಫ್ಯಾನ್ ಫಾಲೋಯಿಂಗ್ ಜಾಸ್ತಿ ಆಗಿದೆ. ಅವರೇ ಬಿಗ್ ಬಾಸ್ ಟ್ರೋಫಿ ಗೆಲ್ಲಬೇಕು ಎಂದು ಅಭಿಮಾನಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ. ಶ್ರೀ ಕಾಮಧೇನು ಕ್ಷೇತ್ರದ ಶಿರಡಿ ಸಾಯಿ ದೇವಸ್ಥಾನದಲ್ಲಿ ಗಿಲ್ಲಿ ಫ್ಯಾನ್ಸ್ ಪೂಜೆ ಮಾಡಿಸಿದ್ದಾರೆ. ಗಿಲ್ಲಿಯೇ ಬಿಗ್ ಬಾಸ್ ಗೆಲಲ್ಲಿ ಎಂದು ಪೂಜೆ ಹಾಗೂ ಅರ್ಚನೆ ಮಾಡಿಸಲಾಗಿದೆ. ‘ಟ್ಯಾಲೆಂಟ್ ಇರೋ ಬಡವರ ಮಕ್ಳು ಗೆಲ್ಬೇಕು’ ಎಂದು ಗಿಲ್ಲಿ ಅಭಿಮಾನಿಗಳು ಬ್ಯಾನರ್ ಹಿಡಿದುಕೊಂಡು ನಿಂತಿದ್ದಾರೆ. ಗಿಲ್ಲಿ ನಟಿಸಿದ್ದ ‘ದಿ ಡೆವಿಲ್’ ಸಿನಿಮಾದ ಟ್ರೇಲರ್ ಅನ್ನು ಬಿಗ್ ಬಾಸ್ ಮನೆಯ ಒಳಗೆ ಹಾಕಿಲ್ಲ ಎಂಬುದು ಕೆಲವು ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿದೆ. ಜನವರಿ 17 ಮತ್ತು 18ರಂದು ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಫಿನಾಲೆ ನಡೆಯಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
