ಗಿಲ್ಲಿ ಆಸೆ ನೆರವೇರಿಸಿದ ಬಿಗ್ ಬಾಸ್; ಪ್ರೀತಿಯಲ್ಲಿರೋ ಸುಖ ಗೊತ್ತಿರಲಿಲ್ಲ ಎಂದ ಕಾವ್ಯಾ-ನಟ

Edited By:

Updated on: Oct 31, 2025 | 4:22 PM

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಕಾವ್ಯಾ ಶೈವ ಅವರು ಸಾಕಷ್ಟು ಗಮನ ಸೆಳೆದರು. ಈಗ ಅವರು ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ಜೊತೆ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ಸಂದರ್ಭದ ಪ್ರೋಮೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ .

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ (BBk 12) ಕಾವ್ಯಾ ಶೈವ ಅವರು ಸೂರಜ್ ಜೊತೆ ಡ್ಯಾನ್ಸ್ ಮಾಡಿದ್ದರು. ಇದನ್ನು ನೋಡಿ ಗಿಲ್ಲಿ ಬೇಸರ ಮಾಡಿಕೊಂಡಿದ್ದರು. ಈ ಕಾರಣದಿಂದಲೇ ಕಾವ್ಯಾ ಹಾಗೂ ಗಿಲ್ಲಿಗೆ ಡ್ಯಾನ್ಸ್ ಮಾಡೋಕೆ ಅವಕಾಶ ನೀಡಲಾಗಿದೆ. ಬಿಗ್ ಬಾಸ್ ಅವಕಾಶದಿಂದ ಗಿಲ್ಲಿ ಅವರು ಖುಷಿ ಪಟ್ಟರು. ಪ್ರೀತಿಯಲ್ಲಿರೋ ಸುಖ ಗೊತ್ತಿರಲಿಲ್ಲ ಎಂಬ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Oct 31, 2025 12:18 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More