ಗಿಲ್ಲಿ ನಟನ ಹುಟ್ಟೂರಲ್ಲಿ ಬ್ಯಾನರ್, ಕಟೌಟ್: ಹಳ್ಳಿ ಮಂದಿ ಖುಷಿ ನೋಡಿ..

Updated on: Jan 16, 2026 | 8:28 PM

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ ತಲುಪಿರುವ ಗಿಲ್ಲಿ ಪರವಾಗಿ ರಾಜ್ಯಾದ್ಯಂತ ಅಭಿಮಾನಿಗಳು ಪ್ರಚಾರ ಮಾಡುತ್ತಿದ್ದಾರೆ. ಗಿಲ್ಲಿ ಅವರ ಹುಟ್ಟೂರಿನಲ್ಲಿ ಜನರು ದೊಡ್ಡ ದೊಡ್ಡ ಬ್ಯಾನರ್, ಕಟೌಟ್ ಹಾಕಿ ಸಂಭ್ರಮಿಸುತ್ತಿದ್ದಾರೆ. ಹೌದು, ಗಿಲ್ಲಿ ಅವರ ಊರು ದಡದಪುರದಲ್ಲಿ ಗ್ರಾಮಸ್ಥರ ಸಂಭ್ರಮ ಜೋರಾಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ (Bigg Boss Kannada Season 12 Finale) ತಲುಪಿರುವ ಗಿಲ್ಲಿ ಪರವಾಗಿ ರಾಜ್ಯಾದ್ಯಂತ ಅಭಿಮಾನಿಗಳು ಪ್ರಚಾರ ಮಾಡುತ್ತಿದ್ದಾರೆ. ಗಿಲ್ಲಿ ಅವರ ಹುಟ್ಟೂರಿನಲ್ಲಿ ಜನರು ದೊಡ್ಡ ದೊಡ್ಡ ಬ್ಯಾನರ್, ಕಟೌಟ್ ಹಾಕಿ ಸಂಭ್ರಮಿಸುತ್ತಿದ್ದಾರೆ. ಹೌದು, ಗಿಲ್ಲಿ ಅವರ ಊರು ದಡದಪುರದಲ್ಲಿ (Dadadapura) ಗ್ರಾಮಸ್ಥರ ಸಂಭ್ರಮ ಜೋರಾಗಿದೆ. ‘ವೋಟ್ ಫಾರ್ ಗಿಲ್ಲಿ’ ಎಂದು ಘೋಷಣೆ ಕೂಗಲಾಗುತ್ತಿದೆ. ಕಾಮಿಡಿ ಮೂಲಕ ಗಿಲ್ಲಿ ನಟ (Gilli Nata) ಅವರು ಎಲ್ಲರನ್ನು ಮನರಂಜಿಸಿದ್ದಾರೆ. ಅವರೇ ಈ ಬಾರಿ ಬಿಗ್ ಬಾಸ್ ಟ್ರೋಫಿ ಗೆಲ್ಲುತ್ತಾರೆ ಎಂಬ ಅಭಿಪ್ರಾಯ ಜನರಿಗೆ ಇದೆ. ರಕ್ಷಿತಾ ಶೆಟ್ಟಿ, ಕಾವ್ಯಾ ಶೈವ, ಅಶ್ವಿನಿ ಗೌಡ, ಧ್ರುವಂತ್, ಮ್ಯೂಟೆಂಟ್ ರಘು ಕೂಡ ಬಿಗ್ ಬಾಸ್ ಫಿನಾಲೆ ಕಣದಲ್ಲಿ ಇದ್ದಾರೆ. ಜನವರಿ 18ರಂದು ಬಿಗ್ ಬಾಸ್ ಬಾಸ್ ಫಿನಾಲೆ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.