‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್

Updated on: Dec 31, 2025 | 8:56 AM

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಹಾಗೂ ಧ್ರುವಂತ್ ಒಟ್ಟಾಗಿ ಇರುತ್ತಾರೆ. ಇವರನ್ನು ಟೀಕಿಸುವ ಕೆಲಸವನ್ನು ಮಾಡ್ತಾ ಇರೋದು ಗಿಲ್ಲಿ ನಟ. ಇಬ್ಬರನ್ನೂ ಕೆಣಕಿ ಅವರು ಸಾಕಷ್ಟು ಚರ್ಚೆಗೆ ಕಾರಣರಾಗಿದ್ದಾರೆ. ಇವರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗಿದೆ.

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಸ್ಟ್ರಾಂಗ್ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದಾರೆ. ಈಗ ಇವರು ಅಶ್ವಿನಿ ಹಾಗೂ ಧ್ರುವಂತ್​​ನ ಕೆಣಕಿದ್ದಾರೆ. ಇದರ ಪರಿಣಾಮ ಜೋರಾಗಿಯೇ ಆಗಿದೆ. ‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’ ಎಂದು ಅಶ್ವಿನಿ ಹಾಗೂ ಧ್ರುವಂತ್ ಚಾಲೆಂಜ್ ಮಾಡಿದ್ದಾರೆ. ಕೆಣಕಿದಾಗ ಅಶ್ವಿನಿ ಉರಿದು ಬೀಳುತ್ತಿದ್ದರು. ಆದರೆ, ನಂತರ ಅವರ ಆಟದಲ್ಲಿ ಬದಲಾವಣೆ ಆಗಿತ್ತು. ಈಗ ಅವರು ಮತ್ತೆ ಹಳೆ ಫಾರ್ಮ್​​ಗೆ ಮರಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More