ಬಿಗ್ ಬಾಸ್ ಮನೆಯೊಳಗೆ ಗಿಲ್ಲಿ ಮಾತು ಕೇಳಿ ಬಿದ್ದುಬಿದ್ದು ನಕ್ಕ ಅಶ್ವಿನಿ ಗೌಡ ತಾಯಿ
ಅಶ್ವಿನಿ ಗೌಡ ತಾಯಿ ಅವರು ಗಿಲ್ಲಿ ಜೊತೆ ಮಾತನಾಡಿ, ‘ಒಬ್ಬರಿಗೊಬ್ಬರು ಮನಸ್ತಾಪ ಮಾಡಿಕೊಳ್ಳಬೇಡಿ. ಚೆನ್ನಾಗಿರಿ’ ಎಂದು ಸಲಹೆ ನೀಡಿದ್ದಾರೆ. ಅವರನ್ನು ಅತ್ತೆ ಎಂದು ಕರೆಯಲು ಗಿಲ್ಲಿ ಶುರು ಮಾಡಿದರು. ಈ ಕ್ಷಣ ಸಖತ್ ಫನ್ ಆಗಿದೆ. ಡಿಸೆಂಬರ್ 24ರ ಸಂಚಿಕೆಯ ಪ್ರೋಮೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ರಿಯಾಲಿಟಿ ಶೋನಲ್ಲಿ ಫ್ಯಾಮಿಲಿ ವೀಕ್ ನಡೆಯುತ್ತಿದೆ. ಅಂದರೆ, ಬಿಗ್ ಬಾಸ್ ಸ್ಪರ್ಧಿಗಳ ಕುಟುಂಬದವರು ಒಬ್ಬೊಬ್ಬರಾಗಿಯೇ ದೊಡ್ಮನೆಗೆ ಬಂದು ಹೋಗುತ್ತಿದ್ದಾರೆ. ಅಶ್ವಿನಿ ಗೌಡ (Ashwini Gowda) ಅವರ ತಾಯಿ ಕೂಡ ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದಾರೆ. ಅವರು ಬಂದ ಕ್ಷಣ ಅಶ್ವಿನಿ ಗೌಡ ತುಂಬಾ ಎಮೋಷನಲ್ ಆದರು. ಅಶ್ವಿನಿ ತಾಯಿ ಅವರು ಗಿಲ್ಲಿ ಜೊತೆ ಮಾತನಾಡಿ, ‘ಒಬ್ಬರಿಗೊಬ್ಬರು ಮನಸ್ತಾಪ ಮಾಡಿಕೊಳ್ಳಬೇಡಿ. ಚೆನ್ನಾಗಿರಿ’ ಎಂದು ಸಲಹೆ ನೀಡಿದ್ದಾರೆ. ಅವರನ್ನು ಅತ್ತೆ ಎಂದು ಕರೆಯಲು ಗಿಲ್ಲಿ ನಟ (Gilli Nata) ಶುರು ಮಾಡಿದರು. ಈ ಕ್ಷಣ ಸಖತ್ ಫನ್ ಆಗಿದೆ. ಡಿಸೆಂಬರ್ 24ರ ಸಂಚಿಕೆಯ ಪ್ರೋಮೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ‘ಜಿಯೋ ಹಾಟ್ ಸ್ಟಾರ್’ ಒಟಿಟಿ ಹಾಗೂ ‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಪೂರ್ತಿ ಸಂಚಿಕೆ ವೀಕ್ಷಿಸಿ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
