ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ ಉತ್ತರ
ಬಿಗ್ ಬಾಸ್ ಮನೆಯಿಂದ ಹೊರಗೆ ನಟ ಧ್ರುವಂತ್ ಹೋಗಲು ನಿರ್ಧರಿಸಿದ್ದಾರೆ. ಹಾಗಾಗಿ ಇದೇ ವಿಷಯವನ್ನು ಇಟ್ಟುಕೊಂಡು ಅವರನ್ನು ಹಲವರು ನಾಮಿನೇಟ್ ಮಾಡಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ 12 ರಿಯಾಲಿಟಿ ಶೋನಲ್ಲಿ ಇಷ್ಟು ದಿನ ಧ್ರುವಂತ್ ಕಳೆದ ದಿನಗಳ ಬಗ್ಗೆ ಗಿಲ್ಲಿ ಒಂದಷ್ಟು ಪ್ರಶ್ನೆ ಕೇಳಿದ್ದಾರೆ.
ನಟ ಧ್ರುವಂತ್ ಅವರು ಬಿಗ್ ಬಾಸ್ (BBK 12) ಮನೆಯಿಂದ ಹೊರಗೆ ಹೋಗಲು ನಿರ್ಧರಿಸಿದ್ದಾರೆ. ಹಾಗಾಗಿ ಅದೇ ವಿಷಯವನ್ನು ಇಟ್ಟುಕೊಂಡು ಅವರನ್ನು ಅನೇಕರು ನಾಮಿನೇಟ್ ಮಾಡಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಈವರೆಗೆ ಧ್ರುವಂತ್ (Dhruvanth) ಕಳೆದ ದಿನಗಳ ಬಗ್ಗೆ ಗಿಲ್ಲಿ ನಟ ಕೆಲವು ಪ್ರಶ್ನೆ ಕೇಳಿದ್ದಾರೆ. ‘ನಿಮ್ಮ ಮೇಲೆ ಬುಕ್ ಬರೆಯುತ್ತೇನೆ. ಅದಕ್ಕಾಗಿ ಕೆಲವು ಪ್ರಶ್ನೆ ಕೇಳುತ್ತೇನೆ’ ಎಂದು ಗಿಲ್ಲಿ ನಟ (Gilli Nata) ಹೇಳಿದ್ದಾರೆ. ಗಿಲ್ಲಿ ಕೇಳಿದ ಎಲ್ಲ ಪ್ರಶ್ನೆಗಳಿಗೂ ಧ್ರುವಂತ್ ಅವರು ಕಾಮಿಡಿಯಾಗಿ ಉತ್ತರ ನೀಡಿದ್ದಾರೆ. ಡಿಸೆಂಬರ್ 4ರ ಸಂಚಿಕೆಯ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ‘ಜಿಯೋ ಹಾಟ್ ಸ್ಟಾರ್’ ಮತ್ತು ‘ಕಲರ್ಸ್ ಕನ್ನಡ’ದಲ್ಲಿ ಪೂರ್ತಿ ಸಂಚಿಕೆ ನೋಡಬಹುದು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಚಿನ್ನದಂಗಡಿ ದೋಚಿ ಬಸ್ ಸ್ಟ್ಯಾಂಡ್ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ

