ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ ಉತ್ತರ

Updated on: Dec 04, 2025 | 7:16 PM

ಬಿಗ್ ಬಾಸ್ ಮನೆಯಿಂದ ಹೊರಗೆ ನಟ ಧ್ರುವಂತ್ ಹೋಗಲು ನಿರ್ಧರಿಸಿದ್ದಾರೆ. ಹಾಗಾಗಿ ಇದೇ ವಿಷಯವನ್ನು ಇಟ್ಟುಕೊಂಡು ಅವರನ್ನು ಹಲವರು ನಾಮಿನೇಟ್ ಮಾಡಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ 12 ರಿಯಾಲಿಟಿ ಶೋನಲ್ಲಿ ಇಷ್ಟು ದಿನ ಧ್ರುವಂತ್ ಕಳೆದ ದಿನಗಳ ಬಗ್ಗೆ ಗಿಲ್ಲಿ ಒಂದಷ್ಟು ಪ್ರಶ್ನೆ ಕೇಳಿದ್ದಾರೆ.

ನಟ ಧ್ರುವಂತ್ ಅವರು ಬಿಗ್ ಬಾಸ್ (BBK 12) ಮನೆಯಿಂದ ಹೊರಗೆ ಹೋಗಲು ನಿರ್ಧರಿಸಿದ್ದಾರೆ. ಹಾಗಾಗಿ ಅದೇ ವಿಷಯವನ್ನು ಇಟ್ಟುಕೊಂಡು ಅವರನ್ನು ಅನೇಕರು ನಾಮಿನೇಟ್ ಮಾಡಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಈವರೆಗೆ ಧ್ರುವಂತ್ (Dhruvanth) ಕಳೆದ ದಿನಗಳ ಬಗ್ಗೆ ಗಿಲ್ಲಿ ನಟ ಕೆಲವು ಪ್ರಶ್ನೆ ಕೇಳಿದ್ದಾರೆ. ‘ನಿಮ್ಮ ಮೇಲೆ ಬುಕ್ ಬರೆಯುತ್ತೇನೆ. ಅದಕ್ಕಾಗಿ ಕೆಲವು ಪ್ರಶ್ನೆ ಕೇಳುತ್ತೇನೆ’ ಎಂದು ಗಿಲ್ಲಿ ನಟ (Gilli Nata) ಹೇಳಿದ್ದಾರೆ. ಗಿಲ್ಲಿ ಕೇಳಿದ ಎಲ್ಲ ಪ್ರಶ್ನೆಗಳಿಗೂ ಧ್ರುವಂತ್ ಅವರು ಕಾಮಿಡಿಯಾಗಿ ಉತ್ತರ ನೀಡಿದ್ದಾರೆ. ಡಿಸೆಂಬರ್ 4ರ ಸಂಚಿಕೆಯ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ‘ಜಿಯೋ ಹಾಟ್​ ಸ್ಟಾರ್’ ಮತ್ತು ‘ಕಲರ್ಸ್ ಕನ್ನಡ’ದಲ್ಲಿ ಪೂರ್ತಿ ಸಂಚಿಕೆ ನೋಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More