Video: ಮೂರನೇ ಮಹಡಿಯಿಂದ ಬಿದ್ದು ಬಾಲಕಿ ಸಾವು; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಮೂರನೇ ಮಹಡಿಯಿಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ಭೀಕರ ದೃಶ್ಯ ಮನೆಯ ಮುಂಭಾಗದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.
ದೆಹಲಿ: ಮೂರನೇ ಮಹಡಿಯಿಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ಘಟನೆ ದೆಹಲಿಯ ಸಾಗರ್‌ಪುರ ಪ್ರದೇಶದಲ್ಲಿ ನಡೆದಿದೆ. ವರದಿಗಳ ಪ್ರಕಾರ, ಬುಧವಾರ ತಡರಾತ್ರಿ ಬಾಲಕಿ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಮನೆಯ ಮುಂಭಾಗದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಬಾಲಕಿ ಬೀಳುವ ದೃಶ್ಯ ಸೆರೆಯಾಗಿದೆ. ಬಿದ್ದ ಸದ್ದು ಕೇಳಿದ ತಕ್ಷಣ ನೆರೆಹೊರೆಯವರು ಧಾವಿಸಿದ್ದು, ಬಾಲಕಿ ರಸ್ತೆಯಲ್ಲಿ ರಕ್ತಸಿಕ್ತವಾಗಿ ಬಿದ್ದಿರುವುದನ್ನು ಕಂಡು ಆಘಾತಕೊಳಗಾಗಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ