ಬಿಸಿಎಂ ಹಾಸ್ಟೆಲ್​​​​​ನಲ್ಲಿ ಹುಡುಗ-ಹುಡುಗಿಯರಿಂದ ಬಿಂದಾಸ್ ಎಣ್ಣೆ ಪಾರ್ಟಿ, ವಿಡಿಯೋ ವೈರಲ್

Edited By:

Updated on: Jun 10, 2026 | 4:04 PM

ಗ್ರಾಮೀಣ ಭಾಗದ ಬಡ ಮಕ್ಕಳಿಗಾಗಿ ಅನೂಕೂಲವಾಗಲೆಂದು ಸರ್ಕಾರಗಳು ವಸತಿ ನಿಲಯಗಳನ್ನು (ಹಾಸ್ಟೆಲ್​) ನಿರ್ಮಿಸುತ್ತಿವೆ. ಆದ್ರೆ, ಕಲಬುರಗಿಯಲ್ಲಿ ಬಿಸಿಎಂ ಮಹಿಳಾ ಹಾಸ್ಟೆಲ್ ನಲ್ಲಿ ಬಿಂದಾಸ್ ಆಗಿ ಮಧ್ಯ ಸೇವೆನೆ ಮಾಡಿದ್ದು, ನಾಗರಿಕ ಸಮಾಜ ತಲೆ ತಗ್ಗಿಸುವಂತಿದೆ. ಹೌದು... ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ಹಾಸ್ಟೆಲ್ ನದ್ದು ಎನ್ನಲಾಗುತ್ತಿರೋ ಈ ವಿಡಿಯೋ ಭಾರೀ ವೈರಲ್ ಆಗಿದೆ.

ಕಲಬುರಗಿ, (ಜೂನ್ 10): ಗ್ರಾಮೀಣ ಭಾಗದ ಬಡ ಮಕ್ಕಳಿಗಾಗಿ ಅನೂಕೂಲವಾಗಲೆಂದು ಸರ್ಕಾರಗಳು ವಸತಿ ನಿಲಯಗಳನ್ನು (ಹಾಸ್ಟೆಲ್​) ನಿರ್ಮಿಸುತ್ತಿವೆ. ಆದ್ರೆ, ಕಲಬುರಗಿಯಲ್ಲಿ (Kalaburagi) ಬಿಸಿಎಂ ಮಹಿಳಾ ಹಾಸ್ಟೆಲ್ ನಲ್ಲಿ ಬಿಂದಾಸ್ ಆಗಿ ಮಧ್ಯ ಸೇವೆನೆ ಮಾಡಿದ್ದು, ನಾಗರಿಕ ಸಮಾಜ ತಲೆ ತಗ್ಗಿಸುವಂತಿದೆ. ಹೌದು… ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ಹಾಸ್ಟೆಲ್ ನದ್ದು ಎನ್ನಲಾಗುತ್ತಿರೋ ಈ ವಿಡಿಯೋ ಭಾರೀ ವೈರಲ್ ಆಗಿದೆ. ಇನ್ನು ವಿದ್ಯಾರ್ಥಿನಿ ಬೀಯರ್ ಕುಡಿಯುತ್ತಿರೋ ದೃಶ್ಯ ವೈರಲ್ ಬೆನ್ನಲ್ಲೇ ಇದನ್ನೇ ವಾರ್ಡನ್ ಬಂಡವಾಳ ಮಾಡಿಕೊಂಡಿಕೊಂಡಿದ್ದು, ಪ್ರಕರಣ ಮುಚ್ಚಿಹಾಕಲು ಹಣ ವಸೂಲಿಳಿದಿದ್ದಾರೆ. ಅಲ್ಲದೇ ಮೂರ್ನಾಲ್ಕು ವಾರ್ಡನ್​​ಗಳು ವಿದ್ಯಾರ್ಥಿನಿಯರನ್ನು ದುರ್ಬಳಿಕೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಸಹ ಕೇಳಿಬಂದಿದೆ. ಇನ್ನು ವಾರ್ಡನ್ ಹಾಗೂ ವಿದ್ಯಾರ್ಥಿನಿಯ ಆಡಿಯೋ ಕೂಡಾ ವೈರಲ್ ಆಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More