ಕೊಡು ನನ್ ಮಾಮೂಲಿ 1000 ರೂ: ರಾಮನಗರ ಆರ್ಟಿಒ ಕಚೇರಿಯಲ್ಲಿ ಲಂಚಕ್ಕೆ ಬೇಡಿಕೆ, ವಿಡಿಯೋ ವೈರಲ್
ರಾಮನಗರದ RTO ಕಚೇರಿಯಲ್ಲಿ ವಾಹನ ಲೊಕೇಶನ್ ಟ್ರ್ಯಾಕಿಂಗ್ ಡಿವೈಸ್ (VLTD) ಅನುಮೋದನೆಗೆ ಅಧಿಕಾರಿ ಕೃಷ್ಣೇಗೌಡರು ಲಂಚ ಕೇಳಿದ್ದಾರೆಂಬ ಆರೋಪ ಕೇಳಿಬಂದಿದೆ. ಹಣದ ಬೇಡಿಕೆ ಇಟ್ಟಿರುವ ವಿಡಿಯೋ ವೈರಲ್ ಆಗಿದ್ದು, ಪ್ರಾದೇಶಿಕ ಸಾರಿಗೆ ಅಧಿಕಾರಿಯ ನಡೆಯ ವಿರುದ್ಧ ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಮನಗರ, ನವೆಂಬರ್ 5: ರಾಮನಗರದ ಪ್ರಾದೇಶಿಕ ಸಾರಿಗೆ ಕಚೇರಿ (RTO) ಅಧಿಕಾರಿ ಕೃಷ್ಣೇಗೌಡರ ವಿರುದ್ಧ ಭಾರಿ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ವಾಹನ ಲೊಕೇಶನ್ ಟ್ರ್ಯಾಕಿಂಗ್ ಡಿವೈಸ್ (VLTD) ಅಳವಡಿಕೆಗೆ ಅನುಮೋದನೆಗಾಗಿ ಅಧಿಕಾರಿ ಲಂಚದ ಬೇಡಿಕೆ ಇಟ್ಟಿದ್ದಾರೆ ಎಂದು ದೂರಲಾಗಿದೆ. ವಾಹನ ಚಾಲಕರ ಬಳಿ ಸಾವಿರ ರೂಪಾಯಿ ಲಂಚ ಕೇಳಿದ ಆರೋಪದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕೃಷ್ಣೇಗೌಡರು VLTD ಅನುಮೋದನೆಗೆಂದು ಹಣ ಕೇಳಿದ್ದಾರೆ ಎಂದು ಚಾಲಕರು ಆರೋಪಿಸಿದ್ದಾರೆ. ಈ ಘಟನೆ ಬೆಳಕಿಗೆ ಬಂದ ನಂತರ, ಕನ್ನಡಪರ ಹೋರಾಟಗಾರರು RTO ಕೃಷ್ಣೇಗೌಡರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಕುರಿತು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
Published on: Nov 05, 2025 12:32 PM
