104 ಮೀಟರ್ ಸಿಕ್ಸರ್ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಗ್ಲೆನ್ ಮ್ಯಾಕ್ಸ್ವೆಲ್
Melbourne Stars vs Sydney Thunder: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ ತಂಡವು 20 ಓವರ್ಗಳಲ್ಲಿ ಕಲೆಹಾಕಿದ್ದು ಕೇವಲ 128 ರನ್ಗಳು ಮಾತ್ರ. ಈ ಗುರಿಯನ್ನು ಮೆಲ್ಬೋರ್ನ್ ಸ್ಟಾರ್ಸ್ ತಂಡವು 14 ಓವರ್ಗಳಲ್ಲಿ ಚೇಸ್ ಮಾಡಿ 9 ವಿಕೆಟ್ಗಳ ಅಮೋಘ ಗೆಲುವು ದಾಖಲಿಸಿದೆ.
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್ನಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಅಬ್ಬರಿಸಿದ್ದಾರೆ. ಮನುಕಾ ಓವಲ್ ಮೈದಾನದಲ್ಲಿ ನಡೆದ ಸಿಡ್ನಿ ಥಂಡರ್ ವಿರುದ್ಧದ ಪಂದ್ಯದಲ್ಲಿ ಮೆಲ್ಬೋರ್ನ್ ಸ್ಟಾರ್ಸ್ ಪರ ಕಣಕ್ಕಿಳಿದ ಮ್ಯಾಕ್ಸಿ 20 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ ಅಜೇಯ 39 ರನ್ ಬಾರಿಸಿದ್ದಾರೆ.
ಅದರಲ್ಲೂ ಡೇನಿಯಲ್ ಸ್ಯಾಮ್ಸ್ ಎಸೆತದಲ್ಲಿ 104 ಮೀಟರ್ ಸಿಕ್ಸ್ ಸಿಡಿಸುವ ಮೂಲಕ ಮ್ಯಾಕ್ಸ್ವೆಲ್ ವಿಶೇಷ ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಸಿಕ್ಸರ್ ಸರದಾರನಾಗಿ ಎಂಬುದು ವಿಶೇಷ. ಅಂದರೆ ಈ ಪಂದ್ಯದಲ್ಲಿ 2 ಸಿಕ್ಸ್ ಸಿಡಿಸುವುದರೊಂದಿಗೆ ಮ್ಯಾಕ್ಸಿ ಬಿಗ್ ಬ್ಯಾಷ್ ಲೀಗ್ನಲ್ಲಿ 150 ಸಿಕ್ಸರ್ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಈ ಪಟ್ಟಿಯಲ್ಲಿ 220 ಸಿಕ್ಸ್ ಸಿಡಿಸಿರುವ ಕ್ರಿಸ್ ಲಿನ್ ಅಗ್ರಸ್ಥಾನದಲ್ಲಿದ್ದಾರೆ. ಇದೀಗ 151 ಸಿಕ್ಸರ್ಗಳೊಂದಿಗೆ ಗ್ಲೆನ್ ಮ್ಯಾಕ್ಸ್ವೆಲ್ ದ್ವಿತೀಯ ಸ್ಥಾನಕ್ಕೇರಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ ತಂಡವು 20 ಓವರ್ಗಳಲ್ಲಿ ಕಲೆಹಾಕಿದ್ದು ಕೇವಲ 128 ರನ್ಗಳು ಮಾತ್ರ. ಈ ಗುರಿಯನ್ನು ಮೆಲ್ಬೋರ್ನ್ ಸ್ಟಾರ್ಸ್ ತಂಡವು 14 ಓವರ್ಗಳಲ್ಲಿ ಚೇಸ್ ಮಾಡಿ 9 ವಿಕೆಟ್ಗಳ ಅಮೋಘ ಗೆಲುವು ದಾಖಲಿಸಿದೆ.

